ಬೆಂಗಳೂರು ನಗರ

ದಯಾನಂದ, ಮೊಹಂತಿ ವರ್ಗಾವಣೆಗೆ ಹುನ್ನಾರ

Published On :

ಬೆಂಗಳೂರು: ನಗರದ ಜಂಟಿ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಹಾಗೂ ಪ್ರಣವ್ ಮೊಹಂತಿ ಅವರ ವರ್ಗಾವಣೆಗೆ ಸರ್ಕಾರ ಹುನ್ನಾರ ನಡೆಸಿದೆ.
ಇವರ ಸ್ಥಾನಕ್ಕೆ ಬರಲು ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಪ್ರಬಲ ಲಾಬಿನಡೆಸುತ್ತಿರುವ ಹಿನ್ನೆಲೆಯಲ್ಲಿ ದಕ್ಷ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಇಬ್ಬರು ಅಧಿಕಾರಿಗಳು ಬೆಂಗಳೂರು ನಗರಕ್ಕೆ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಬಳಿಕ ಅಪರಾಧ ಪ್ರಕರಣಗಳನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆಗೊಳಿಸುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಹಲವು ಮಹತ್ವದ ಪ್ರಕರಣಗಳ ತನಿಖೆಗೆ ಹೊಸ ಆಯಾಮ ನೀಡಿದ್ದಾರೆ. ಭಯೋತ್ಪಾದಕ ಚಟುವಟಿಕೆ, ಸಂಚು ಪ್ರಕರಣಗಳು ಸೇರಿದಂತೆ ದೊಡ್ಡ ಪ್ರಕರಣಗಳು ಇವರ ಉಸ್ತುವಾರಿಯಲ್ಲೇ ತನಿಖೆ ನಡೆಯುತ್ತಿವೆ. ಈ ಹಂತದಲ್ಲಿ ನಗರದಲ್ಲಿ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಜಂಟಿ ಆಯುಕ್ತರ ವರ್ಗಾವಣೆ ಸಮಂಜಸವೇ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.
ಪ್ರಕಾಶ್ ಸಿಂಗ್ ಮತ್ತು ಕೇಂದ್ರ ಸರ್ಕಾರ ನಡುವಿನ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಕನಿಷ್ಟ ಒಂದು ಹುದ್ದೆಗೆ 2 ವರ್ಷ ಕಾಲಾವಧಿ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದು ಅಧಿಕಾರಿಗಳನ್ನು ಮನ ಬಂದಂತೆ ವರ್ಗಾವಣೆ ಮಾಡುವುದಕ್ಕೆ ಅಡ್ಡಿಯಾಗುತ್ತದೆ ಎಂದು ರಾಜ್ಯ ಸರ್ಕಾರ ಈ ಅವಧಿಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ಬಿ. ದಯಾನಂದ ಹಾಗೂ ಪ್ರಣವ್ ಮೊಹಂತಿ ಅವರ ವರ್ಗಾವಣೆಗೆ ಪ್ರಯತ್ನ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.