ನಂದಗುಡಿಗೆ ಸುವರ್ಣ ಯೋಜನೆ
ಸೂಲಿಬೆಲೆ: ಇಲ್ಲಿಗೆ ಸಮೀಪದ ನಂದಗುಡಿ ಗ್ರಾಮವನ್ನು ಸುವರ್ಣ ಗ್ರಾಮೋದಯ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸುನ ಕಾಮಗಾರಿಗೆ ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಚಾಲನೆ ನೀಡಿದ್ದಾರೆ. ನಂದಗುಡಿ ಗ್ರಾಪಂ ಆವರಣದಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಹೊಸಕೋಟೆ ತಾಲೂಕು ಸಮಗ್ರ ಅಭಿವೃದ್ಧಿಗೆ ಅಗತ್ಯವಾಗಿರುವ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ನಂದಗುಡಿ ಹೋಬಳಿ ಇನ್ನಷ್ಟು ಅಭಿವೃದ್ಧಿ ಕಾಣುವ ಉದ್ದೇಶದಿಂದ ಸುವರ್ಣ ಗ್ರಾಮೋದಯ ಯೋಜನೆಗೆ ಆಳವಡಿಸಿ ಸುಮಾರು ರು.77 ಲಕ್ಷ ಹಣವನ್ನು ಮಂಜೂರು ಮಾಡಲಾಗಿದೆ. ಗುಣಾತ್ಮಕ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚಿಸಿದರು. ನಂದಗುಡಿ ಗ್ರಾಪಂ ಅಧ್ಯಕ್ಷೆ ಸವಿತಾ ರಾಜಶೇಖರ್, ತಾಪಂ ಮಾಜಿ ಅಧ್ಯಕ್ಷ ಬಿ.ವಿ ರಾಜಶೇಖರ್ಗೌಡ, ಜಿಪಂ ಸದಸ್ಯೆ ಸವಿತಾ ಗೋಪಾಲ್, ತಾಪಂ ಸದಸ್ಯೆ ಸುಮಿತ್ರಾ ಮಂಜುನಾಥ್, ಗ್ರಾಪಂ ಉಪಾಧ್ಯಕ್ಷರತ್ನಮ್ಮ,ಪಿಡಿಒ ಮುನಿಗಂಗಯ್ಯ ಸೇರಿದಂತೆ ಹಲವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

