ಪೆಟ್ರೋಲ್ ಬಂಕ್ ನೌಕರನ ಹತ್ಯೆ ಮಾಡಿದ್ದ ನಾಲ್ವರ ಸೆರೆ
ಬೆಂಗಳೂರು: ವಾಹನಕ್ಕೆ ಪೆಟ್ರೋಲ್ ತುಂಬಿಸುವಾಗ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಬಂಕ್ ನೌಕರನನ್ನು ಹತ್ಯೆ ಮಾಡಿದ್ದ ನಾಲ್ವರನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಣಸವಾಡಿಯ ಯುವರಾಜ್(20), ಕಮ್ಮನಹಳ್ಳಿಯ ಮ್ಯಾಥ್ಯೂ(21), ಸುಬ್ಬಯ್ಯನಪಾಳ್ಯದ ತಿಜೋ(20), ರಾಮಮೂರ್ತಿ ನಗರದ ನವೀನ್(19) ಬಂಧಿತರು. ವಿನೋದ್ ಹಾಗೂ ಮಣಿ ಎಂಬುವವರು ತಲೆಮರೆಸಿಕೊಂಡಿದ್ದಾರೆ.
ಆರೋಪಿಗಳು ವಾಹನಕ್ಕೆ ಪೆಟ್ರೋಲ್ ಹಾಕಿಸಲು ಫೆ. 24ರಂದು ಸಂಜೆ ಕಲ್ಕೆರೆಯ ಎಂ.ಆರ್. ಪೆಟ್ರೋಲ್ ಬಂಕ್‌ಗೆ ಹೋಗಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಅಲ್ಲಿನ ನೌಕರರ ಜೊತೆ ಜಗಳ ತೆಗೆದು ರಾಜು(35) ಎಂಬಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ರಾಜು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.
ಈ ಸಂಬಂಧ ಬಂಕ್ ಮಾಲೀಕ ರವಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ವಾಹನ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

