ಸಾರ್ವಜನಿಕರ ಕರ್ತವ್ಯ ಸರ್ಕಾರದ ಮೇಲೆ ಹೇರುವ ಪ್ರಯತ್ನ ಸಲ್ಲ: ಹೈಕೋರ್ಟ್
ಬೆಂಗಳೂರು: ಸಂವಿಧಾನದ ಪರಿಚ್ಚೇದ 21(ಜೀವಿಸುವ ಹಕ್ಕು ಕಾಯ್ದೆ) ಹೆಸರಿನಲ್ಲಿ ಸಾರ್ವಜನಿಕರ ಕರ್ತವ್ಯಗಳನ್ನು ಕೂಡ ಸರ್ಕಾರದ ಮೇಲೆ ಹೊರಿಸುವ ಪ್ರಯತ್ನ ಸರಿಯಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳುವುದು ಮಕ್ಕಳ ಕರ್ತವ್ಯ. ಆ ಜವಾಬ್ದಾರಿಯನ್ನು ಕೂಡ ಸರ್ಕಾರದ ತಲೆಗೆ ಕಟ್ಟುವುದು ಸರಿಯಲ್ಲ ಎಂದು ಹಂಗಾಮಿ ಮುಖ್ಯ ನ್ಯಾ. ಶ್ರೀಧರ್‌ರಾವ್ ಹಾಗೂ ನ್ಯಾ. ಅಬ್ದುಲ್ ನಜೀರ್ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.
ವೃದ್ಧರನ್ನು ಕಡ್ಡಾಯವಾಗಿ ವೈದ್ಯಕೀಯ ವಿಮೆಯ ವ್ಯಾಪ್ತಿಗೆ ತರಬೇಕು. ವೃದ್ಧರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಕೋರಿ ಡಾ. ಸುಬ್ರಹ್ಮಣ್ಯ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಪೀಠ, ವೃದ್ಧ ಪೋಷಕರನ್ನು ಕಡೆಗಣಿಸುವ ಮಕ್ಕಳ ವಿರುದ್ಧ ಮೊಕದ್ದಮೆ ದಾಖಲಿಸಲು ಹಿಂದೂ ದತ್ತಿ ಕಾಯ್ದೆಯಲ್ಲಿ ಅವಕಾಶವಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಸಲಹೆ ನೀಡಿ ಅರ್ಜಿಯನ್ನು ಇತ್ಯರ್ಥಗೊಳಿಸಿತು. ಹಿಂದೂ ಧರ್ಮದಲ್ಲಿ ಅವಿಭಕ್ತ ಕುಟುಂಬಗಳು ಕುಸಿಯುತ್ತಿರುವುದು ಆತಂಕಕಾರಿ. ಇದರಿಂದ ವೃದ್ಧ ಪೋಷಕರು ಪೋಷಣೆಯಿಲ್ಲದೆ ಸೊರಗುತ್ತಿದ್ದಾರೆ. ಆದರೆ, ಕ್ರೈಸ್ತ ಮತ್ತು ಮುಸ್ಲಿಂ ಜನಾಂಗದಲ್ಲಿ ಇನ್ನೂ ಅವಿಭಕ್ತ ಕುಟುಂಬ ವ್ಯವಸ್ಥೆ ಜಾರಿಯಲ್ಲಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

