ಬೆಂಗಳೂರು ನಗರ

ಹೆಬ್ಬಾಳ: ಕಾಮಗಾರಿಗಳಲ್ಲಿ ಅವ್ಯವಹಾರ

Published On :

ಬೆಂಗಳೂರು: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಈ ಕುರಿತು ತನಿಖೆ ಮಾಡಬೇಕು ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸಿ. ಮುನಿಕೃಷ್ಣ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಈ ಕ್ಷೇತ್ರದಲ್ಲಿ 700ರಿಂದ 750 ಕೋಟಿ ಮೌಲ್ಯದ ಕಾಮಗಾರಿ ನಡೆದಿದೆ ಎಂದು ಶಾಸಕರೇ ಹೇಳುತ್ತಿದ್ದಾರೆ. ನಾಗರಿಕರಿಗೆ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸಲಾಗಿದೆ ಎಂದು ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ, ಇದು ಸತ್ಯಕ್ಕೆ ದೂರವಾದದ್ದು. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಬಿಬಿಎಂಪಿಯಿಂದ ಉದ್ಯಾನಗಳ ಅಭಿವೃದ್ಧಿಗೆ ಐದು ಕೋಟಿ ರುಪಾಯಿ ವೆಚ್ಚ ಮಾಡಲಾಗಿದೆ. ಆದರೆ, ಅಭಿವೃದ್ಧಿಯೇ ಆಗಿಲ್ಲ. ಹೆಬ್ಬಾಳ ವಿಧಾನಸಭೆ ಕ್ಷೇತ್ರಕ್ಕೆ ಸರ್ಕಾರದಿಂದ 15 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪಾಲಿಕೆಯಿಂದ ವಾಸ್ತವಾಂಶದ ತನಿಖೆ ನಡೆಸಬೇಕು ಹಾಗೂ ಹಣ ಬಿಡುಗಡೆ ಆಗಿರುವ ಬಗ್ಗೆ ವರದಿ ತಯಾರಿಸಬೇಕು. 2008-09ರಿಂದ 2012-13ನೇ ಸಾಲಿನವರೆಗೆ ಶಾಸಕರ ಅನುದಾನ, ಸರ್ಕಾರದ ಅನುದಾನ ಹಾಗೂ ಬಿಬಿಎಂಪಿ ವತಿಯಿಂದ ಹೆಬ್ಬಾಳ ಕ್ಷೇತ್ರದಲ್ಲಿ ಕೈಗೊಂಡಿರುವ ಕಾಮಗಾರಿಗಳ ತನಿಖೆ ಆಗಬೇಕು. ಅದರ ಅಲ್ಲ ವಿವರಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಯುಕ್ತ ಸಿದ್ದಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ಸಿ. ಮುನಿಕೃಷ್ಣ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.