ಕೃಷಿ, ರೈತ ಸಮಸ್ಯೆಗಳಿಗೆ ಬಜೆಟ್‌ನಲ್ಲಿ ಪರಿಹಾರ: ಸಿಎಂ

Updated on: 

ಬೆಂಗಳೂರು: ಕೃಷಿ ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದು ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಬಜೆಟ್ ತಯಾರಿಯ ಪೂರ್ವಭಾವಿಯಾಗಿ ರೈತರು - ರೈತ ಮುಖಂಡರೊಂದಿಗೆ ಮಂಗಳವಾರ ಮಾತುಕತೆ ನಡೆಸಿದ ನಂತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.
ಕೃಷಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿದ್ದೇನೆ. ಇದಕ್ಕೆ ಪರಿಹಾರ ಕಲ್ಪಿಸುವ ಜತೆಗೆ ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲು ಕೃಷಿ ಬಜೆಟ್ ಮೀಸಲಿಡಲಾಗುತ್ತದೆ. ಅಂತರ್ಜಲ ವೃದ್ಧಿ, ಕೆರೆಗೆ ನೀರು ಹರಿಸುವುದು, ಬರಗಾಲದಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ ಕಲ್ಪಿಸುವ ಜನತೆಗೆ ರೈತರಿಗೆ ಸೌಲಭ್ಯ ಕಲ್ಪಿಸುವ ಕಾರ್ಯಕ್ರಮಗಳನ್ನು ಕೃಷಿ ಬಜೆಟ್‌ನಲ್ಲಿ ಅಳವಡಿಸುವ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಶೆಟ್ಟರ್ ಹೇಳಿದರು.
ಕೃಷಿಗೆ ಹೆಚ್ಚಿನ ಆದ್ಯತೆ ನೀಡುವ ಜತೆಗೆ, ಒಟ್ಟಾರೆ ಬಜೆಟ್‌ನ ಶೇ.50ರಷ್ಟು ಅನುದಾನವನ್ನು ಕೃಷಿ ಕ್ಷೇತ್ರಕ್ಕೇ ಮೀಸಲಿಡಬೇಕು. ಕೃಷಿ ವಿವಿ, ಕಬ್ಬು ದರ ನಿಗದಿ, ಬೀಜ, ಗೊಬ್ಬರ, ವ್ಯವಸಾಯ ಸಲಕರಣೆಗಳ ರಿಯಾಯಿತಿ ದರ, ಸಣ್ಣ ರೈತರಿಗೆ ಸಹಾಯ, ಬಡ್ಡಿರಹಿತ ಸಾಲ ಯೋಜನೆಗಳನ್ನು ಬಜೆಟ್‌ನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿಕೊಂಡಿದ್ದೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಬರಪೀಡಿತ ತಾಲೂಕುಗಳ ರೈತರಿಗೆ ಬರ ಪರಿಹಾರ ಧನ, 25 ಸಾವಿರ ರುಪಾಯಿ ಸಾಲ ಮನ್ನ ಎಲ್ಲ ರೈತರಿಗೂ ಅನ್ವಯ, ಉತ್ತರ ಕರ್ನಾಟಕದಲ್ಲಿ ವಿದ್ಯುತ್ ವಿತರಣೆ ವ್ಯವಸ್ಥೆ ಸುಧಾರಣೆ, ಕೆಸಿಸಿ ಬ್ಯಾಂಕ್‌ಗೆ ಅನುದಾನ ನೀಡಬೇಕು ಎಂದು ರಾಜ್ಯ ಪಕ್ಷಾತೀತ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಿ.ಎಂ. ಹನಸಿ ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com