ಬೆಂಗಳೂರು: ಸೋಸಲೆ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿದೆ. ಆಡಳಿತಾಧಿಕಾರಿ ನೇಮಕದ ಕ್ರಮವನ್ನು ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವ್ಯಾಸರಾಜ ಮಠದ ವಿದ್ಯಾ ಮನೋಹರ ತೀರ್ಥ ಸ್ವಾಮೀಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಶ್ರೀಧರ್ರಾವ್ ಹಾಗೂ ನ್ಯಾ. ಅಬ್ದುಲ್ ನಜೀರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿದೆ. ಮಠದಲ್ಲಿ ಹಣದ ಅವ್ಯವಹಾರದ ಆರೋಪ ಬಂದ ಹಿನ್ನೆಲೆಯಲ್ಲಿ ಮಠವನ್ನು ಸರ್ಕಾರದ ವಶಕ್ಕೆ ತೆಗೆದುಕೊಂಡು ಆಡಳಿತಾಧಿಕಾರಿಯನ್ನು ನೇಮಿಸಲಾಗಿತ್ತು. ಈ ಸಂದರ್ಭದಲ್ಲಿ ಮಠದ ಬ್ಯಾಂಕ್ ಖಾತೆಯನ್ನು ವಶಪಡಿಸಿಕೊಳ್ಳಲಾಗಿತ್ತು. ಇದನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. ಸರ್ಕಾರ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದೀಗ ಚಾತುರ್ಮಾಸ್ಯ ಆಚರಣೆಗೆ ಹಣ ನೀಡುವಂತೆ ಕೇಳಿದರೆ, ಆಡಳಿತಾಧಿಕಾರಿ ಚೆಕ್ ನೀಡುತ್ತಾರೆ. ಅದರಿಂದ ಹಣ ಪಡೆಯುವುದು ಹೇಗೆ ಎಂದು ಅರ್ಜಿದಾರರು ಪ್ರಶ್ನಿಸಿದ್ದಾರೆ.