ಬೆಂಗಳೂರು ನಗರ

ಫಲಪುಷ್ಪ ಪ್ರದರ್ಶನ ಸ್ಪರ್ಧೆ; ಬಿಡಿಎ ಪ್ರಥಮ, ಬಿಬಿಎಂಪಿ ದ್ವಿತೀಯ

Published On :

ಬೆಂಗಳೂರು: ತೋಟಗಾರಿಕೆ ಇಲಾಖೆ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮೊದಲನೇ ಸ್ಥಾನ ಪಡೆದಿದ್ದು, 101 ಬಹುಮಾನ, 13 ರೋಲಿಂಗ್ ಶೀಲ್ಡ್ ಮತ್ತು ಒಂದು ಟ್ರೋಫಿ ತನ್ನದಾಗಿಸಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 618 ಪಾಯಿಂಟ್ಸ್ ಪಡೆಯುವ ಮೂಲಕ ಎರಡನೇ ಬಹುಮಾನ, 12 ರೋಲಿಂಗ್ ಶೀಲ್ಡ್‌ಗಳನ್ನು ಬಾಚಿಕೊಂಡಿದೆ. ಲಾಲ್‌ಬಾಗ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಹೂದೋಟಗಳು, ತರಕಾರಿ ತೋಟ, ತಾರಸಿ ತೋಟಗಳು, ಕುಂಡದ ಹೂಗಳು, ಉದ್ಯಾನವನ ಸ್ಪರ್ಧೆಗಳು, ಇಕೆಬಾನ, ಪುಷ್ಪಭಾರತಿ, ಕಲಾವಿನ್ಯಾಸ, ತರಕಾರಿ ಕೆತ್ತನೆ ಹಾಗೂ ಪೂರಕ ಕಲೆಗಳು ಪ್ರದರ್ಶನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ಲಾಲ್‌ಬಾಗ್‌ನ ಡಾ.ಎಂ.ಎಚ್. ಮರಿಗೌಡ ಸ್ಮಾರಕ ಭವನದಲ್ಲಿ ಗುರುವಾರ ನೆರವೇರಿತು.
ಸಾರ್ವಜನಿಕರಿಗೂ ಪ್ರವೇಶ: ಗುರುವಾರ ಶಾಲಾಮಕ್ಕಳಿಗೆ ಮಾತ್ರ ಪ್ರವೇಶವಿದ್ದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದ ನೋಟ ಅಪರಾಹ್ನವಾಗುತ್ತಿದ್ದಂತೆ ಒತ್ತಾಯದ ಮೇರೆಗೆ ಸಾರ್ವಜನಿಕರಿಗೂ ದೊರೆಯಿತು. ಶಾಲಾ-ಮಕ್ಕಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಪ್ರದರ್ಶನಕ್ಕೆ ಹೊಸ ಕಳೆಕಟ್ಟಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.