ಬೆಂಗಳೂರು ನಗರ

ನಾರಾಯಣಗೌಡರಿಗೆ ಪಿತೃ ವಿಯೋಗ

Published On :

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ತಂದೆ ಅನಂತೇಗೌಡ(78) ಅವರು ಶನಿವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅನಂತೇಗೌಡ ಅವರು ಹಾಸನ ಜಿಲ್ಲೆ ಅರಸಿಕೆರೆಯ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ವಾಸವಿದ್ದು, ನಗರದಲ್ಲಿ ಮೃತಪಟ್ಟ ಸಂಬಂಧಿಯೊಬ್ಬರ ಕುಟುಂಬಕ್ಕೆ ಸಾಂತ್ವನ ಹೇಳಲು ಗುರುವಾರ ಬೆಂಗಳೂರಿಗೆ ಆಗಮಿಸಿದ್ದರು. ಎರಡು ದಿನ ಕಾಲ ನಗರದಲ್ಲಿ ತಂಗಿದ್ದ ಅವರು ಶನಿವಾರ ಬೆಳಗಿನ ಜಾವ ತಮ್ಮ ಊರಿಗೆ ಮರಳುತ್ತಿರುವಾಗ ಹೆಸರಘಟ್ಟ ರಸ್ತೆಯಲ್ಲಿ ಹೃದಯಬೇನೆ ಉಂಟಾಗಿದೆ. ಬಳಿಕ ಅವರನ್ನು ಸಮೀಪದ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 8 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಗೌರಮ್ಮ, ಪುತ್ರ ನಾರಾಯಣಗೌಡ(ದ್ವಿತೀಯ ಪುತ್ರ) ಒಳಗೊಂಡಂತೆ 8 ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಉಪಮುಖ್ಯಮಂತ್ರಿ ಆರ್.ಅಶೋಕ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಉಪ ಮಹಾಪೌರ ಶ್ರೀನಿವಾಸ್ ಸೇರಿದಂತೆ ಹಲವರು ಅನಂತೇಗೌಡರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಅವರ ಸ್ವಗ್ರಾಮ ಮಾಲೆಕಲ್ ತಿರುಪತಿಯಲ್ಲಿ ವಿದ್ಯುಕ್ತವಾಗಿ ನಡೆಯಲಿದೆ ಎಂದು ಕರವೇ ಪ್ರಧಾನಕಾರ್ಯದರ್ಶಿ ಸಣ್ಣೀರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.