ಈದ್ ಮಿಲಾದ್ ಪ್ರಯುಕ್ತ ಸಾಮೂಹಿಕ ವಿವಾಹ
ಕೃಷ್ಣರಾಜಪುರ: ವಿಶ್ವಕ್ಕೆ ಶಾಂತಿ ಸೌಹಾರ್ದತೆ ಸಂದೇಶ ಸಾರಿದ ಪ್ರವಾದಿ ಮಹಮ್ಮದ್ ಫೃಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಅಲ್ ಜಮೀತ್- ಉಲ್- ಖಾದ್ರಿಯಾ ಸುನ್ನಿ ಎಜುಕೇಶನಲ್ ಟ್ರಸ್ಟ್ ವತಿಯಿಂದ ಬಡವರಿಗೆ ಸಾಮೂಹಿಕ ವಿವಾಹಗಳನ್ನು ಆಯೋಜಿಸಲಾಗಿತ್ತು. ಕ್ಷೇತ್ರದ ವಿಜನಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಪ್ರಯುಕ್ತ ಸಾಮೂಹಿಕ ವಿವಾಹದಲ್ಲಿ ದಂಪತಿಗೆ ಗೃಹ ಬಳಕೆ ವಸ್ತುಗಳನ್ನು ವಿತರಣೆ ಮಾಡಲಾಯಿತು.
ಕಾರ್ಯದರ್ಶಿ ಸೈಯದ್ ಸಮೀವುಲ್ಲಾ ಮಾತನಾಡಿ, ಈದ್-ಮಿಲಾದ್ ಪ್ರಯುಕ್ತ ಕಳೆದ 10 ವರ್ಷಗಳಿಂದ ನಿರಂತರವಾಗಿ ಉಚಿತ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಂಡು ಬರುತ್ತಿದ್ದು. ಈ ವರ್ಷ 10 ಜೋಡಿಗಳಿಗೆ ಕಂಕಣ ಭಾಗ್ಯ ಕಲ್ಪಿಸಿರುವುದಾಗಿ ತಿಳಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡವರು ಸಂಕಷ್ಟ ಎದುರುಸುತ್ತಿರುವ ಸಂದರ್ಭದಲ್ಲಿ ಸಾಮೂಹಿಕ ವಿವಾಹಗಳಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದರು. ಇದಕ್ಕೂ ಮುನ್ನಾ ವಿಜನಾಪುರದ ಪ್ರಮುಖ ಬೀದಿಗಳಲ್ಲಿ ಮಿಲಾದ್- ಉನ್- ನಬಿಯಾ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಹೆಲಿಕಾಪ್ಟರ್ ಮೂಲಕ ಮೆರವಣಿಗೆಯಲ್ಲಿದ್ದ ಪ್ರವಾದಿ ಮಹಮ್ಮದ್ ಫೃಗಂಬರ್ ಮೆರವಣಿಗೆ ಮೇಲೆ ಪುಷ್ಪವೃಷ್ಟಿ ಮಾಡಿದ್ದು ವಿಶೇಷವಾಗಿತ್ತು.
ಸೈಯದ್ ಮಹಬೂಬ್, ಅಖ್ತರುನ್ನೀಸಾ, ಟ್ರಸ್ಟ್ ಅಧ್ಯಕ್ಷ ಹಾಜಿ ಸೈಯದ್ ಮಸ್ತಾನ್, ಸೈಯದ್ ಜಾಫರ್, ತೌಫೀಕ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

