ಬೆಂಗಳೂರು ನಗರ

ಜಲಮಂಡಳಿ ಮುಖ್ಯ ಎಂಜಿನಿಯರ್ ದೆಹಲಿಗೆ

Published On :

ಬೆಂಗಳೂರು: ನಗರದ ಜನತೆಗೆ ಕುಡಿಯುವ ನೀರಿನ ಅಗತ್ಯದ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯಪರ ವಕೀಲರಿಗೆ ಹೆಚ್ಚಿನ ಮಾಹಿತಿ ಒದಗಿಸುವ ಸಲುವಾಗಿ ಜಲಮಂಡಳಿ ಮುಖ್ಯ ಎಂಜಿನಿಯರ್ ಅವರನ್ನು ದೆಹಲಿಗೆ ಕಳುಹಿಸಿದೆ ಎಂದು ಜಲಮಂಡಳಿ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಸುಪ್ರೀಂ ಕೋರ್ಟ್ ಕುಡಿಯುವ ನೀರಿಗೆ ಆದ್ಯತೆ ನೀಡುವುದಾಗಿ ಹೇಳಿರುವುದರಿಂದ ನಗರದ ಜನರಿಗೆ ಕುಡಿಯುವ ನೀರನ್ನು ಪೂರೈಸಲು ಅದು ಪೂರಕವಾಗಿರುತ್ತದೆ ಎಂಬ ಭರವಸೆ ಇದೆ. ಜತೆಗೆ ಆ ಸಂಬಂಧ 1992ರಿಂದ ನಗರದಲ್ಲಿನ ಕುಡಿಯುವ ನೀರಿನ ಪ್ರಮಾಣ ಕುರಿತು ವರದಿ ನೀಡುವಂತೆ ನ್ಯಾಯಾಲಯ ಸೂಚಿಸಿದೆ. 1993ರಲ್ಲಿ ಕಾವೇರಿ 3ನೇ ಹಂತ, 2003ರಲ್ಲಿ ಕಾವೇರಿ 4ನೇ ಹಂತ 2ನೇ ಘಟ್ಟ ಆರಂಭಗೊಂಡಿದೆ. 2012ರಲ್ಲಿ ಕಾವೇರಿ 4ನೇ ಹಂತ 2ನೇ ಘಟ್ಟ ಆರಂಭಗೊಂಡಿದ್ದು, ನಗರಕ್ಕೆ ಪೂರೈಕೆಯಾಗುತ್ತಿರುವ ಕಾವೇರಿ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಹಾಗಾಗಿ ಪ್ರತಿ ತಿಂಗಳು 1.5 ಟಿಎಂಸಿಯಂತೆ ಜನವರಿಯಿಂದ ಜೂನ್ ಕೊನೆಯವರೆಗೆ 7.5 ಟಿಎಂಸಿ ನೀರು ಬೇಕಾಗುತ್ತಿದ್ದು, ಈಗ 6 ಟಿಎಂಸಿ ನೀರಿನ ಅಗತ್ಯವಿದೆ ಎಂದು ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ನಗರದ ಜನತೆಯ ಪರವಾಗಿ ಹೆಚ್ಚಿನ ಕಾಳಜಿ ವಹಿಸಿ ವಾದ ಮಂಡಿಸಲು ರಾಜ್ಯಪರ ವಕೀಲರಿಗೆ ಅಗತ್ಯ ಮಾಹಿತಿ ಒದಗಿಸುವ ಸಲುವಾಗಿ ಜಲಮಂಡಳಿ ಮುಖ್ಯ ಎಂಜಿನಿಯರ್ ನಾರಾಯಣ ಅವರನ್ನು ದೆಹಲಿಗೆ ಕಳುಹಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.