ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಾಲನೆ
ಕೃಷ್ಣರಾಜಪುರ: ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕಣ್ಣೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಕೇವಲ ಬಡವರು ಮಾತ್ರ ಸೀಮಿತವಾಗದೆ ಶ್ರೀಮಂತರೂ ಸಹ ಇದರ ಸದುಪಯೋಗ ಪಡಿಸಿಕೊಳ್ಳುವಂತಹ ಸುಸಜ್ಜಿತ ಚಿಕಿತ್ಸೆಯನ್ನು ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು ಮುಂದಿನ ದಿಗಳಲ್ಲಿ ಸದುಪಯೋಗ ಪಡೆಸಿಕೊಳ್ಳುವಂತೆ ಮನವಿ ಮಾಡಿದರು. ಬಿಪಿಎಲ್ ಕಾರ್ಡ್‌ನಿಂದ ಆಗುವಂತಹ ಅನುಕೂಲಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು, ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.
ಹೆರಿಗೆ ಸಂದರ್ಭದಲ್ಲಿ ತಾಯಿ ಮಗುವನ್ನು ರಕ್ಷಿಸಲು 108 ಆ್ಯಂಬುಲೆನ್ಸ್ ಯಶಸ್ವಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಮಗು ನಗು ಎಂಬ ಯೋಜನೆ ಜಾರಿಗೆ ತರುವ ಚಿಂತನೆ ನಡೆದಿದೆ ಎಂದರು. ಈ ಹಿಂದೆ ಮಡಿಲು ಕಿಟ್‌ನಲ್ಲಿ ನೀಡುತ್ತಿದ್ದ ಸಲಕರಣಗಳ ಜೊತೆಗೆ ನೃಟಿಗಳನ್ನು ನೀಡಲು ಚಿಂತನೆ ನಡೆಸಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಶೋಭಾ ರಮೇಶ್, ಎಪಿಎಂಸಿ ಸದಸ್ಯ ನಾರಾಯಣರೆಡ್ಡಿ, ತಾಲೂಕು ಪಂಚಾಯತಿ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷರಾದ ಲಕ್ಷ್ಮಮ್ಮ, ಕಣ್ಣೂರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಅಂಕಣ್ಣಪ್ಪ, ಸದಸ್ಯರಾದ ಮಂಜುನಾಥ್, ಮುಖಂಡರಾದ ಆನಂದ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪ್ರಭುಚಂದ್ರ ಹಾಗೂ ಅಧಿಕಾರಿಗಳು ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

