ಬೆಂಗಳೂರು: ಮಾಗಡಿ ಮತ್ತು ಚನ್ನಪಟ್ಟಣ ವ್ಯಾಪ್ತಿಯಲ್ಲಿ 2009 ರಿಂದ 2012ರವರೆಗೆ ಲೋಕೋಪಯೋಗಿ ಇಲಾಖೆಯ ವಿವಿಧ ಮೂಲಸೌಕರ್ಯ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ರಾಜ್ಯ ರೈತ ಸಂಘದ ಸದಸ್ಯ ಸಿ.ಪುಟ್ಟಸ್ವಾಮಿ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮಾಹಿತಿ ಹಕ್ಕು ಕಾಯಿದೆ ಅನ್ವಯ ಪಡೆದ ದಾಖಲೆಗಳನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಒಂದೇ ಸ್ಥಳದ ಕಾಮಗಾರಿಗಳನ್ನು ಕೆಲ ತಿಂಗಳುಗಳ ಅಂತರದಲ್ಲಿ ಎರಡು ಬಾರಿ ನಡೆಸಲಾಗಿದೆ. ಆದರೆ ಕೆಲಸ ಮಾತ್ರ ನಡೆದಿಲ್ಲ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಸಿ.ಪುಟ್ಟಸ್ವಾಮಿ ಆರೋಪಿಸಿದ್ದಾರೆ.