ಬೆಂಗಳೂರು ನಗರ

'ಆತುರದಲ್ಲೂ ದಂಪತಿ ಸಂಬಂಧ ಗಟ್ಟಿಗೊಳ್ಳಲಿ'

Published On :

ಬೆಂಗಳೂರು: ಆತುರದ ಜೀವನಶೈಲಿಯ ನಡುವೆಯೂ ಸಂಬಂಧ ಉತ್ತಮಪಡಿಸಿಕೊಳ್ಳುವ ಬಗ್ಗೆ ದಂಪತಿ ಹೆಚ್ಚಿನ ಗಮನ ನೀಡಬೇಕು ಎಂದು ಸಾಹಿತಿ ಡಾ.ಹಂಪ ನಾಗರಾಜಯ್ಯ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ರತ್ನ ಪ್ರತಿಷ್ಠಾನ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಕರ್ನಾಟಕ ರತ್ನ ಆದರ್ಶ ದಂಪತಿ-2013 ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮದುವೆಯಾಗಿ ಒಂದು ತಿಂಗಳು ಸಂಸಾರ ಸಾಗಿಸಿದರೆ ಅದನ್ನೇ ಗಿನ್ನೆಸ್ ದಾಖಲೆ ಎಂದು ಭಾವಿಸಲಾಗುತ್ತಿದೆ. ಆಧುನಿಕ ಜೀವನಶೈಲಿ ಹಾಗೂ ಕಾರ್ಯದೊತ್ತಡದಿಂದಾಗಿ ಸಂಸಾರದಲ್ಲಿ ಹತಾಶೆ, ಭಿನ್ನಾಭಿಪ್ರಾಯ ಉಂಟಾಗಿ ದಾಂಪತ್ಯದಲ್ಲಿ ಅಪಸ್ವರ ಮೂಡುವುದು ಸಹಜ. ಆದರೂ ಆತುರದ ಜೀವನಶೈಲಿ ನಡುವೆಯೂ ಸಂಬಂಧ ಉತ್ತಮಪಡಿಸಿಕೊಳ್ಳುವ ಬಗ್ಗೆ ಗಮನ ನೀಡಬೇಕು ಎಂದರು.
ಶಾಸಕ ರವಿಸುಬ್ರಹ್ಮಣ್ಯ ಅವರು ಮಾತನಾಡಿದರು. ಡಾ.ಆರ್.ಕೆ.ನಲ್ಲೂರು ಪ್ರಸಾದ್ ಮತ್ತು ನಳಿನಿ ಪ್ರಸಾದ್ ದಂಪತಿಗೆ 'ಕರ್ನಾಟಕ ರತ್ನ ಆದರ್ಶ ದಂಪತಿ-2013' ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೆಡಿಎಸ್ ಮುಖಂಡ ಎಂ.ಸಿ.ನಾರಾಯಣಗೌಡ, ಪ್ರತಿಷ್ಠಾನದ ಅಧ್ಯಕ್ಷ ಎಂ.ಆರ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಂ.ಬಿ.ಲಿಂಗರಾಜು ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.