ಸೌರಶಕ್ತಿ ಬಳಸುವಂತೆ ಕೈಗಾರಿಕೆಗಳಿಗೆ ಕರೆ
ಕ.ಪ್ರ. ವಾರ್ತೆ ಬೆಂಗಳೂರು ಮಾ.26-
ವಿದ್ಯುತ್ ಅಭಾವ ಹಿನ್ನೆಲೆಯಲ್ಲಿ ಕೈಗಾರಿಕೋದ್ಯಮಿಗಳು ಪರ್ಯಾಯವಾಗಿ ಸೌರಶಕ್ತಿಯನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ(ಎಫ್ಕೆಸಿಸಿಐ) ಶಕ್ತಿ ಸಮಿತಿ ಅಧ್ಯಕ್ಷ ಎಂ.ಜಿ. ಪ್ರಭಾಕರ್ ಹೇಳಿದರು.
ಕರ್ನಾಟಕ ಟೆಕ್ಸ್ಟೈಲ್ ಮಿಲ್ಸ್ ಅಸೋಸಿಯೇಷನ್ ಮಂಗಳವಾರ ಖಾಸಗಿ ಹೊಟೇಲ್ನಲ್ಲಿ ಆಯೋಜಿಸಿದ್ದ 44ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ನೀಡುತ್ತಿರುವ ವಿದ್ಯುತ್ನಲ್ಲಿ ಯಂತ್ರಗಳ ಚಾಲನೆ ಮಾಡುವುದು ತುಂಬಾ ಕಷ್ಟವಾಗಿದೆ. ವಿದ್ಯುತ್ ವ್ಯತ್ಯಯ ಸಂದರ್ಭದಲ್ಲಿ ಸಾಕಷ್ಟು ಪರದಾಟ ನಡೆಸಬೇಕಾಗುತ್ತದೆ ಈ ಸಮಸ್ಯೆಗೆ ಅಲ್ಪ ಪ್ರಮಾಣದ ಪರಿಹಾರ ಕಂಡುಕೊಳ್ಳಲು ನಾವು ಸೌರಶಕ್ತಿ ಮೊರೆ ಹೋಗಬೇಕಿರುವುದು ಅನಿವಾರ್ಯವಾಗಿದೆ ಎಂದರು.
2012ರಲ್ಲಿ ಹತ್ತಿ ಬೆಲೆ ಕಡಿಮೆ ಆಗಿರುವುದರಿಂದ ಕೈಗಾರಿಕೆಗಳು ನಷ್ಟದಲ್ಲಿವೆ. ಅಲ್ಲದೆ, ಹತ್ತಿ ರಫ್ತು ಮಾಡಲು ಸಾಕಷ್ಟು ನಿರ್ಬಂಧಗಳಿವೆ. ಕೈಗಾರಿಕೆಗಳಿಗೆ ಬ್ಯಾಂಕ್ಗಳು ಶೇ.15 ಬಡ್ಡಿದರದಲ್ಲಿ ಸಾಲ ನೀಡುತ್ತಿವೆ ಇದನ್ನು ಕಡಿಮೆ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಟೆಕ್ಸ್ಟೈಲ್ ಮಿಲ್ಸ್ ಅಸೋಸಿಯೇಷನ್ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಅಭಿನಂದಿಸಿದರು. ಸಂಘ ಅಧ್ಯಕ್ಷ ಸಿ. ವಳ್ಳಿಯಪ್ಪ, ಉಪಾಧ್ಯಕ್ಷ ಎ.ಎಸ್. ವೀರಣ್ಣ, ವಿ.ಎಸ್. ರಾಜಾಗೋಪಾಲ್, ಡಿ.ಎಸ್. ಮಂಜುನಾಥ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

