ಪೊಲೀಸ್ ವರ್ಗಾವಣೆಗೂ' ಚು'ಮಂತ್ರ

Updated on: 

ಕ.ಪ್ರ. ವಾರ್ತೆ ಬೆಂಗಳೂರು ಮಾ.28-
ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತಾರದೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತಿಲ್ಲ.
ಪೊಲೀಸ್ ವರ್ಗಾವಣೆ, ಚುನಾವಣೆ ಸಂದರ್ಭದಲ್ಲಿ ಬಹುಮುಖ್ಯ ವಿಚಾರವಾಗಿದ್ದು, ಡಿಜಿಪಿಯಿಂದ ಹಿಡಿದು ಕೆಳ ಹಂತದ ಅಧಿಕಾರಿಗಳನ್ನು ವರ್ಗ ಮಾಡುವಾಗಲೂ ಆಯೋಗದ ಗಮನಕ್ಕೆ ತರಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾ ಸರ್ಕಾರಕ್ಕೆ ಪತ್ರ ಬರೆದು ತಿಳಿಸಿದ್ದಾರೆ. ಈ ಬಗ್ಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. 90 ಪೊಲೀಸ್ ಇನ್‌ಸ್ಪೆಕ್ಟರ್ ವರ್ಗಾವಣೆ ವಿಚಾರ ಇನ್ನೂ ಆಯೋಗದ ಗಮನಕ್ಕೆ ಬಂದಿಲ್ಲ. ಸರ್ಕಾರ ಈ ನಿರ್ದೇಶನಗಳನ್ನು ಸ್ಪಷ್ಟವಾಗಿ ಪಾಲಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.
ಆಯೋಗ ಭೇಟಿ: ಏಪ್ರಿಲ್ 8 ಹಾಗೂ 9ರಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸಂಪತ್ ಹಾಗೂ ಇತರೆ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಏ.8ರಂದು ಮಧ್ಯಾಹ್ನ ನಾಲ್ಕು ಗಂಟೆಯಿಂದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜತೆಗೆ, ಏ.9ರಂದು ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು. ಅದೇ ರೀತಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಚುನಾವಣಾ ಆಯೋಗದ ಸಹಯೋಗದೊಂದಿಗೆ ಚುನಾವಣಾ ವರದಿಗಾರಿಕೆ ಹಾಗೂ ಮಾಧ್ಯಮ ಎಂಬ ಕಾರ್ಯಾಗಾರ ಆಯೋಜಿಸಲಾಗಿದೆ. ಕಾಸಿಗಾಗಿ ಸುದ್ದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು, ಹಿರಿಯ ಪತ್ರಕರ್ತರು ಭಾಗವಹಿಸುತ್ತಾರೆ ಎಂದು ಹೇಳಿದರು.

ಆಯೋಗದ ಅಂಗಳದಲ್ಲಿ...
ವಿದ್ಯುತ್ ದರ ಏರಿಕೆ ವಿಚಾರ ಸಂಬಂಧ ಕೆಲ ಮಹತ್ವದ ಮಾಹಿತಿಗಳನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾ ತಿಳಿಸಿದ್ದಾರೆ. ಕರ್ನಾಟಕ ವಿದ್ಯುತ್ ನಿಯಂತ್ರಣಾ ಪ್ರಾಧಿಕಾರ (ಕೆಇಆರ್‌ಸಿ ) ಒಂದು ಶಾಸನಾತ್ಮಕ ಸಂಸ್ಥೆ. ಅದರ ನಿರ್ಧಾರಗಳಲ್ಲಿ ಆಯೋಗ ಮೂಗು ತೂರಿಸುವುದಿಲ್ಲ. ಆದರೆ ಆಯೋಗ ಕೆಲ ಮಾಹಿತಿಗಳನ್ನು ಕೋರಿತ್ತು. ಅದನ್ನು ಕಳುಹಿಸಿಕೊಟ್ಟಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com