ಕ.ಪ್ರ. ವಾರ್ತೆ ಬೆಂಗಳೂರು ಮಾ.28
ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 2011ನೇ ಸಾಲಿನ 362 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಏ.1ರಿಂದ 24ರವರೆಗೆ ನಡೆಸಲಿರುವ ವ್ಯಕ್ತಿತ್ವ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಹೆಸರು, ನೋಂದಣಿ ಸಂಖ್ಯೆ ಮತ್ತು ವ್ಯಕ್ತಿತ್ವ ಪರೀಕ್ಷಾ ದಿನಾಂಕ,ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಮೀಸಲುವಾರು ಕಟಾಫ್ ಅಂಕಗಳ ಮಾಹಿತಿಯನ್ನು ಆಯೋಗದ ವೆಬ್‌ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ.