ರೆಡ್‌ಕ್ರಾಸ್ ಸಂಸ್ಥೆಯಲ್ಲಿ ಅವ್ಯವಹಾರ; ಆರೋಪ

Updated on: 

ಬೆಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ಅನೇಕ ಅವ್ಯವಹಾರ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಮಾಜಿ ಸದಸ್ಯ ಎಚ್. ರಾಮಕೃಷ್ಣ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಕಾರ್ಯದರ್ಶಿಯಾಗಿರುವ ಧರ್ಮಪ್ಪ ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ನಿಯಮಗಳನ್ನು ರೂಪಿಸಿದ್ದಾರೆ.
ತಮಗೆ ಬೇಕಾದ ಆಸ್ಪತ್ರೆಗಳಿಗೆ ಮಾತ್ರ ರಕ್ತ ಪೂರೈಕೆ ಮಾಡುತ್ತಿದ್ದಾರೆ. ಕೇವಲ 25 ಸಾವಿರ ಮಾಸಿಕ ವೇತನಕ್ಕೆ ನೇಮಕಗೊಂಡಿದ್ದ ಧರ್ಮಪ್ಪ ಅವರು ಇಂದು ಮಾಸಿಕ 50 ಸಾವಿರ ವೇತನ ಪಡೆಯುತ್ತಿದ್ದಾರೆ. ಇದು ಸಂಸ್ಥೆಯ ಇತಿಹಾಸದಲ್ಲೇ ಅತಿ ಹೆಚ್ಚಿನ ವೇತನ ಎಂದು ಅವರು ಆರೋಪಿಸಿದರು. ಸಂಸ್ಥೆಯ ನೇಮಕ ಪ್ರಕ್ರಿಯೆಯಲ್ಲಿ ಧರ್ಮಪ್ಪ ಅವರು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರು, ನಗರ ಜಿಲ್ಲೆಯಿಂದ ಆಯ್ಕೆಯಾದ ಟಿ.ಎನ್. ರವಿಕುಮಾರ್ ಹಾಗೂ ರಾಮನಗರದಿಂದ ಆಯ್ಕೆಗೊಂಡ ಸುಶೀಲಮ್ಮ ಅವರ ನೇಮಕಾತಿಯನ್ನು ತಿರಸ್ಕರಿಸಿದ್ದಾರೆ. ಆದರೆ, ನಿಯಮಾನುಸಾರ ಪ್ರಧಾನ ಕಾರ್ಯದರ್ಶಿಗೆ ಯಾವುದೇ ನಿಯಮವನ್ನು ತಿರಸ್ಕರಿಸುವ ಅಧಿಕಾರವಿಲ್ಲ ಎಂದು ಕಿಡಿಕಾರಿದರು. ರಾಜ್ಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಏಪ್ರಿಲ್ 1ಕ್ಕೆ ನಿಗದಿಯಾಗಿದ್ದ ಆಡಳಿತ ಮಂಡಳಿ ಸಭೆಯನ್ನು ರದ್ದುಗೊಳಿಸಲಾಗಿದೆ. ಜಿಲ್ಲೆಗಳಿಂದ ನೇಮಕಗೊಂಡ ಅರ್ಜಿಗಳನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು, ರೆಡ್‌ಕ್ರಾಸ್ ಹೆಸರಿನಲ್ಲಿ ವಿವಿಧ ಬ್ಯಾಂಕ್‌ಗಳಲ್ಲಿ ಇರಿಸಲಾಗಿರುವ ನಿಶ್ಚಿತ ಠೇವಣಿಗಳ ದುರ್ಬಳಕೆ ಹಾಗೂ ನೇಮಕಾತಿ ಅವ್ಯವಹಾರದ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com