ಬೆಂಗಳೂರು: ಸಂಜಯ್ ನಗರ ಡಾಲರ್ಸ್ ಕಾಲೋನಿ ನಿವಾಸದಿಂದ ಕಾಂತಾದೇವಿ (65) ಎಂಬುವರು ನಾಪತ್ತೆಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ಮನೆಯಿಂದ ಹೊರ ಹೋದ ಕಾಂತಾದೇವಿ ವಾಪಸಾಗಿಲ್ಲ. ಇತ್ತೀಚೆಗೆ ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಇವರು ಅಸಹಜವಾಗಿ ವರ್ತಿಸುತ್ತಿದ್ದರು ಎಂದು ಮಗ ಸೋಮಶೇಖರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಂಜಯ್ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು. ದೂ. 22942533.