ದೂಧಗಂಗಾ ರೈತರ ಅಭಿವೃದ್ಧಿಗೆ ಶ್ರಮಿಸುವ ಕಾರ್ಖಾನೆ
ಚಿಕ್ಕೋಡಿ: ಮೂರ್ನಾಲ್ಕು ದಶಕಗಳಿಂದ ರೈತರ ಅಭಿವೃದ್ಧಿಗೆ ಶ್ರಮಿಸುತ್ತಿರುವ ದೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯನ್ನು ಅವಿರೋಧ ಆಯ್ಕೆ ಮಾಡುವ ಮೂಲಕ ಇತಿಹಾಸ ನಿರ್ಮಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ತಿಳಿಸಿದರು.
ಅವರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಸಭೆ ಸದಸ್ಯ ಡಾ. ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಪ್ರಸಕ್ತ ಆಡಳಿತ ಮಂಡಳಿ ಅವಿರೋಧವಾಗಿ ಆಯ್ಕೆಯಾಗಿದೆ.
ಕಾರ್ಖಾನೆಯ 35 ವರ್ಷಗಳ ಇತಿಹಾಸದಲ್ಲಿ ಎರಡನೇ ಬಾರಿಗೆ ಆಡಳಿತ ಮಂಡಳಿ ಅವಿರೋಧವಾಗಿ ಆಯ್ಕೆಯಾಗಿದೆ ಎಂದು ಅವರು ತಿಳಿಸಿದರು.
ರಾಜ್ಯಸಭೆ ಸದಸ್ಯ ಡಾ. ಪ್ರಭಾಕರ ಕೋರೆಯವರ ನೇತೃತ್ವದಲ್ಲಿ ರೈತರಿಗೆ ರಿಯಾಯತಿ ದರದಲ್ಲಿ ಗೊಬ್ಬರ, ಹನಿ ನೀರಾವರಿ ಯೋಜನೆ ಸೇರಿದಂತೆ ಆರೋಗ್ಯ ವಿಮೆ ಯೋಜನೆಯ ಸೌಲಭ್ಯವನ್ನು ಒದಗಿಸಲಾಗಿದೆ. ಗಡಿ ಭಾಗದ ರೈತರ ಕಾಮಧೇನು ಆಗಿ ದೂಧ ಗಂಗಾ ಸಹಕಾರಿ ಸಕ್ಕರೆ ಕಾರ್ಖಾನೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಕಾರ್ಖಾನೆಯ ನಿರ್ದೇಶಕ ಅಮೀತ ಕೋರೆ, ಅಣ್ಣಾಸಾಹೇಬ ಜೊಲ್ಲೆ, ಪ್ರಕಾಶ ಪಾಟೀಲ, ಅಜೀತ ದೇಸಾಯಿ, ಭರತೇಶ ಬನವಣೆ, ತಾತ್ಯಾಸಾಹೇಬ ಕಾಟೆ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

