ಕೆಎಲ್ಇ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಸೇವೆ
ಬೆಳಗಾವಿ: ಸರ್ಕಾರಿ ವೈದ್ಯರು ಸೇರಿದಂತೆ ಇತರೆ ಸಿಬ್ಬಂದಿ ಸರ್ಕಾರಿ ಆಸ್ಪತ್ರೆಗಳಲ್ಲಿನ ಎಲ್ಲ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರೋಗಿಗಳ ನೆರವಿಗೆ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಚಾರಿಟೇಬಲ್ ಆಸ್ಪತ್ರೆ ಮುಂದಾಗಿದೆ. ಸರ್ಕಾರಿ ವೈದ್ಯರ ಮುಷ್ಕರದಿಂದಾಗಿ ಎಲ್ಲೆಡೆ ರೋಗಿಗಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೋಗಿಗಳಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸಲು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ನಿರ್ಧರಿಸಿದೆ. ತುರ್ತು ಸಂದರ್ಭಗಳಲ್ಲಿನ ಪ್ರಕರಣ ಹಾಗೂ ಹೆರಿಗೆ ಪ್ರಕರಣ ಸೇರಿದಂತೆ ಆಸ್ಪತ್ರೆ ಹೊರ ರೋಗಿ ವಿಭಾಗದಲ್ಲಿ ಉಚಿತ ವೈದ್ಯಕೀಯ ಸೇವೆ ಒದಗಿಸುವುದರ ಜೊತೆಗೆ ಉಚಿತ ಔಷಧಿ, ಊಟವನ್ನು ನೀಡಲಾಗುವುದು. ಜಿಲ್ಲೆಯ ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆಯಬೇಕು ಎಂದು ಕೆಎಲ್ಇ ವಿಶ್ವವಿದ್ಯಾಲಯ ಕುಲಸಚಿವ ಡಾ.ವಿ.ಡಿ. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದುವರಿದ ಮುಷ್ಕರ: ಸರ್ಕಾರಿ ವೈದ್ಯರ ಸಂಘ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ವೈದ್ಯರು ಸೇರಿದಂತೆ ಇತರೆ ಸಿಬ್ಬಂದಿ ಸೋಮವಾರ ಮುಷ್ಕರ ಮುಂದುವರಿಸಿದ್ದಾರೆ. ಒಟ್ಟು 172 ವೈದ್ಯರು ಹಾಗೂ ಸುಮಾರು ಎರಡು ಸಾವಿರ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸೇವೆ ಸ್ಥಗಿತಗೊಂಡಿರುವುದರಿಂದ ರೋಗಿಗಳುಪರದಾಡುತ್ತಿದ್ದಾರೆ.
ಇಂದಿನಿಂದ ನಂದಗಡದಲ್ಲಿ ಬತ್ತ ಖರೀದಿ ಕೇಂದ್ರ ಆರಂಭ
ಬೆಳಗಾವಿ: ಖಾನಾಪೂರ ತಾಲೂಕಿನ ನಂದಗಡದ ಎಪಿಎಂಸಿ. ಪ್ರಾಂಗಣದಲ್ಲಿ ಬೆಂಬಲ ಬೆಲೆ ಬತ್ತ ಖರೀದಿ ಕೇಂದ್ರ ಫೆ.12 ರಿಂದ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಎನ್. ಜಂುರಾಂ ಹೇಳಿದ್ದಾರೆ. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ನಡೆದ ಜಿಲ್ಲಾ ಟಾಸ್ಕಪೋರ್ಸ ಸಮಿತಿಂು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಂೊಬ್ಬ ರೈತರು ತಮ್ಮ ಕ್ಷೇತ್ರದಲ್ಲಿರುವ ಗ್ರಾಮ ಲೆಕ್ಕಾಧಿಕಾರಿಗಳಿಂದ ಪಹಣಿ ಪತ್ರ ಹಾಗೂ ಅಗತ್ಯ ದಾಖಲಾತಿಗಳನ್ನು ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ಹಾಜರು ಪಡಿಸಬೇಕು. ಜತೆಗೆ ಅಂತಹ ರೈತರಿಂದ 100 ಕ್ವಿಂಟಲ್ ವರೆಗೆ ಭತ್ತ ಖರೀದಿಸಲಾಗುವುದು ಎಂದು ಹೇಳಿದರು.ಬೆಂಬಲ ಬೆಲೆ ಬತ್ತ ಖರೀದಿಸಲು ರು. 250 ಪ್ರೋತ್ಸಾಹ ಧನದೊಂದಿಗೆ ಗ್ರೇಡ್ 'ಎ' ಭತ್ತವನ್ನು ರು. 1530 ಗಳಿಗೆ ಹಾಗೂ ಸಾಮಾನ್ಯ ಬತ್ತವನ್ನು ರು. 1500 ಗಳಿಗೆ ಖರೀದಿಸಲಾಗುತ್ತಿದೆ. ಇದರ ಸದುಪಂೋಗ ರೈತರು ಪಡೆದುಕೊಳ್ಳಬೇಕೆಂದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

