ಬೆಳಗಾವಿ

ಖಾತ್ರಿ ಕೆಲಸ ನೀಡಲು ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

Published On :

ಬೆಳಗಾವಿ: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಡಲೆ ಕೆಲಸ ನೀಡಲು ಆಗ್ರಹಿಸಿ ಸೋಮವಾರ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೂರಾರು ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈಗಾಗಲೆ ಜಿಲ್ಲೆಯಲ್ಲಿ ಬರಗಾಲದ ಛಾಯೆ ಆವರಿಸಿದ್ದರಿಂದ ಹೆಚ್ಚುವರಿಯಾಗಿ 50 ದಿನ ಖಾತ್ರಿ ಯೋಜನೆಯಲ್ಲಿ ಉದ್ಯೋಗ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ. ಆದರೂ, ಇಂದಿಗೂ ಕೂಡಾ ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿಲ್ಲ.
ಇದರಿಂದ ಬಡ ಕೂಲಿ ಕಾರ್ಮಿಕರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ಹೀಗಾಗಿ ಕೂಡಲೆ ಖಾತ್ರಿ ಯೋಜನೆಯಲ್ಲಿ ಕೆಲಸ ದೊರಕಿಸಿಕೊಡುವಂತೆ ಆಗ್ರಹಿಸಿದರು.
ಅದಲ್ಲದೇ, ಗ್ರಾಮೀಣ ಮತ್ತು ತಾಲೂಕು ಪ್ರದೇಶದ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಉಚಿತವಾಗಿ ಔಷಧಿ ಮತ್ತು ಆರೋಗ್ಯೋಪಚಾರ ದೊರೆಯುತ್ತಿಲ್ಲ. ಸರ್ಕಾರಿ ವೈದ್ಯರು ರೋಗಿಗಳಿಗೆ ಔಷಧಿಗಳನ್ನು  ಹೊರಗಡೆಯಿಂದ ಔಷಧಿ ಖರೀದಿಸುವಂತೆ ಸೂಚಿಸುತ್ತಿದ್ದಾರೆ ಎಂದು ಆರೋಪಿಸಿದರು.
ಎಪಿಎಲ್, ಬಿಪಿಎಲ್ ಎಂಬ ತಾರತಮ್ಮ ಮಾಡದೆ ಎಲ್ಲರಿಗೂ ಪಡಿತರದ ಸಾರ್ವತ್ರೀಕರಣ ಮಾಡಬೇಕು.
ಸುಪ್ರೀಂ ಕೋರ್ಟ್ ಆದೇಶದಂತೆ ಸ್ಥಳೀಯ ಗುಣಮಟ್ಟದ ಆಹಾರ ಧಾನ್ಯಗಳನ್ನು ನೀಡಬೇಕು. ಜತೆಗೆ ಛತ್ತೀಸಗಡ್ ರಾಜ್ಯದ ಮಾದರಿಯಂತೆ ಆಹಾರ ಧಾನ್ಯಗಳ ಶೇಖರಣೆ, ಸಂಗ್ರಹಣೆ ಮತ್ತು ವಿತರಣೆಯ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ತಾಲೂಕಾಧ್ಯಕ್ಷ ಮಂಗೇನಕೊಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.