ಬೆಳಗಾವಿ

ಭತ್ಯೆ ತಾರತಮ್ಯ: ನೌಕರರ ಪ್ರತಿಭಟನೆ

Published On :

ಬೆಳಗಾವಿ: ಸರ್ಕಾರ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲ ನೌಕರರಿಗೆ ಹೆಚ್ಚಿಸಿದ ಮನೆ ಬಾಡಿಗೆ ಭತ್ಯೆ(ಎಚ್‌ಆರ್‌ಎ)   ಮಾದರಿಯಲ್ಲಿ ಗ್ರಾಮೀಣ ಮತ್ತು ಪಟ್ಟಣದ ನೌಕರರದು ಹೆಚ್ಚಳ್ಳ ಮಾಡಬೇಕೆಂದು ಆಗ್ರಹಿಸಿ ಬುಧವಾರ ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿ ಸದಸ್ಯರು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಒಂದು ದಿನದ ಸಾಕೇಂತಿಕ ಧರಣಿ ನಡೆಸಿದರು.
ನಂತರ ಜಿಲ್ಲಾಧಿಕಾರಿ ಎನ್. ಜಯರಾಂ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈಗಾಗಲೇ ರಾಜ್ಯ ಸರ್ಕಾರ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲ ವರ್ಗದ ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆಯನ್ನು ಶೇ.25 ರಿಂದ 30ರ ವರೆಗೆ ಹೆಚ್ಚಿಸಿದೆ. ಆದರೆ, ಗ್ರಾಮೀಣ ಮತ್ತು ಪಟ್ಟಣದ ಎಲ್ಲ ವರ್ಗದ ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆಯನ್ನು ಹೆಚ್ಚಿಸದೇ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪದೇ ಪದೇ ತೈಲ ಬೆಲೆ ಹೆಚ್ಚಳದಿಂದ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಇದರ ನೇರ ಪರಿಣಾಮ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮಧ್ಯಮ ವರ್ಗದ ನೌಕರರ ಮೇಲೆ ಬೀಳುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೆ ಬೆಂಗಳೂರು ನಗರದ ನೌಕರರಿಗೆ ನೀಡಿದ ಭತ್ಯೆಯನ್ನು ತಮಗೂ ನೀಡಬೇಕೆಂದು ಒತ್ತಾಯಿಸಿದರು.
ಗ್ರಾಮೀಣ ನೌಕರರಿಗೆ ಅನ್ಯಾಯ: ಅದರಲ್ಲೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ 6ನೇ ವೇತನ ಆಯೋಗದಲ್ಲಿ ಆಗಿರುವ ವೇತನ ತಾರತಮ್ಯವನ್ನು ಕೂಡಲೆ ಸರಿಪಡಿಸಬೇಕು ಹಾಗೂ ಕೇಂದ್ರ ಮತ್ತು ಇತರೆ ರಾಜ್ಯಗಳಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದ್ದು, ಈ ಮಾದರಿಯನ್ನು ರಾಜ್ಯದಲ್ಲಿಯೂ ಜಾರಿ ತರಬೇಕೆಂದು ಒತ್ತಾಯಿಸಿದರು.
ಸರ್ಕಾರ 5ನೇ ವೇತನ ಆಯೋಗದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಹಾಗೂ ನೌಕರರಿಗೆ ಗ್ರಾಮೀಣ ಭತ್ಯೆ ನೀಡಲಾಗುತ್ತಿತ್ತು, ಅದೇ 6ನೇ ವೇತನ ಆಯೋಗದಲ್ಲಿ ಗ್ರಾಮೀಣ ಭತ್ಯೆ ನೀಡುವುದನ್ನು ಕೈಬಿಡುವ ಮೂಲಕ ಗ್ರಾಮೀಣ ಪ್ರದೇಶದ ನೌಕರರಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಇನ್ನೂ ಸರ್ಕಾರ ಶಿಕ್ಷಕರಿಗೆ ರು. 300,400 ಹಾಗೂ 500 ರುಪಾಯಿ ವಿಶೇಷ ವೇತನ ನೀಡುತ್ತಿದೆ. ಈ ಮೊತ್ತವನ್ನು ಒಂದು ಸಾವಿಗೆ ಹೆಚ್ಚಿಸಬೇಕೆಂದು ಧರಣಿ ನಿರತ ಶಿಕ್ಷಕರು ಒತ್ತಾಯಿಸಿದರು.
ರಾಜ್ಯ ಶಿಕ್ಷಕರ ಉಪನ್ಯಾಸಕರ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ಎಸ್.ಡಿ. ಗಂಗಣ್ಣವರ, ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಧಾರವಾಡಮಠ, ರಾಮು ಗುಗವಾಡ, ಡಿ.ಪಿ.ಕೋಳಿ, ಎಸ್.ಎಸ್. ಮಠದ, ಶ್ಯಾಮ ಸುಂದರ, ಬಿ.ವಿ. ತಳವಾರ, ಬಿ.ಬಿ. ಬಾಯಣ್ಣವರ, ಚಂದ್ರಕಾಂತ ಬರಗಾಲಿ, ಅಶೋಕ ಅಣ್ಣಿಗೇರಿ, ಬಸವರಾಜ ಯಳ್ಳೂರ ಮೊದಲಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.