ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಈ ಬಾರಿ 35 ಕನ್ನಡಪರ ಅಭ್ಯರ್ಥಿಗಳ ಆಯ್ಕೆ ಖಚಿತ ಎಂದು ಮಾಜಿ ಮಹಾಪೌರ ಸಿದ್ಧನಗೌಡ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಪಾಲಿಕೆ ಚುನಾವಣೆಯಲ್ಲಿ ಸಂಭಾಜಿ ಪಾಟೀಲ್ ಬೆಂಬಲಿತರು ಸೇರಿ 27 ಕನ್ನಡ ಪರ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಈ ಬಾರಿ ಕನ್ನಡ ಸಂಘಟನೆಗಳ ಬೆಂಬಲಿತ ಅಭ್ಯರ್ಥಿಗಳಲ್ಲದೇ ಬೆಳಗಾವಿ ದಕ್ಷಿಣ ಮತ್ತು ಉತ್ತರ ಶಾಸಕರ ಬೆಂಬಲಿಗ ಅಬ್ಯರ್ಥಿಗಳೂ ಸೇರಿ 35 ಸ್ಥಾನಗಳಲ್ಲಿ ಕನ್ನಡಪರ ಅಭ್ಯರ್ಥಿಗಳು ನಿಶ್ಚಿತವಾಗಿ ಆಯ್ಕೆಯಾಗಲಿದ್ದಾರೆ ಎಂದರು.