ಬಾಲ್ಯ ವಿವಾಹ ತಡೆಯಬೇಕಿದೆ: ಜೋಗುಳೆ
ಚಿಕ್ಕೋಡಿ: ಸಾಧನೆ ಮಾಡಬೇಕೆಂಬ ದೃಢ ಸಂಕಲ್ಪದೊಂದಿಗೆ ಸತತ ಪ್ರಯತ್ನ ಮಾಡಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಮೀಳಾ ಜೋಗುಳೆ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಶುಕ್ರವಾರ ನೆಹರು ಯುವ ಕೇಂದ್ರ ಬೆಳಗಾವಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಚಿಕ್ಕೋಡಿ, ರಂಗದರ್ಶನ ಗ್ರಾಮೀಣ ವಿಕಾಸ ಸಂಘ ಧುಳಗನವಾಡಿ ಆಶ್ರಯದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ, ವೇಶ್ಯಾವಾಟಿಕೆ ತಡೆಯುವಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಗಟ್ಟಿಯಾಗಿ ನಿಲ್ಲಬೇಕಾದ ಅಗತ್ಯವಿದೆ ಎಂದ ಅವರು, ಸಮಾಜದಲ್ಲಿ ನಡೆಯುತ್ತಿರುವ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯದ ಜತೆಗೆ ವರದಕ್ಷಿಣೆ ಪಿಡುಗನ್ನು ಹೋಗಲಾಡಿಸಲು ಮಹಿಳೆಯರು ಒಗ್ಗಟ್ಟಿನಿಂದ ಹೋರಾಡಬೇಕೆಂದರು.
ಸಾಹಿತಿ ಪ್ರೊ. ಎಸ್.ವೈ. ಹಂಜಿ ಮಾತನಾಡಿ, ಜೀವನದಲ್ಲಿ ಪ್ರತಿಯೊಬ್ಬರೂ ತಮ್ಮ ಮನಸ್ಸಿಗೆ ಕಡಿವಾಣ ಹಾಕಬೇಕು. ಭಾವನೆ ಮತ್ತು ಮನಸ್ಸನ್ನು ಹಿಡಿತದಲ್ಲಿಟ್ಟಕೊಂಡು ಓದಿನಲ್ಲಿ ತೊಡಗುವ ಮುಖಾಂತರ ಬದುಕನ್ನು ರೂಪಿಸಿಕೊಳ್ಳಲು ಮುಂದಾಗಬೇಕು. ಗಂಡು ಮಕ್ಕಳಿಗೆ ಸರಿಸಮಾನವಾಗಿ ದುಡಿಯುವ ಇಂದಿನ ಮಹಿಳೆಯರು ಸಮಾಜದಲ್ಲಿ ಸ್ವಾಭಿಮಾನ ಬದುಕು ನಡೆಸಲು ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು ಎಂದರು.
ನ್ಯಾಯವಾದಿ ಉಮಾ ಬಂಡಾರಕರ ಮಾತನಾಡಿದರು. ಉಪಪ್ರಾಚಾರ್ಯ ಆರ್.ಪಿ.ಕಾಗೆ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಅಂಧ ಕಲಾವಿದ ಕುಮಾರ ಬಡಿಗೇರ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಜುಡೋ ಕ್ರೀಡಾಪಟು ತ್ರಿವೇಣಿ ಕಲಕುಟಗಿ ಮತ್ತು ಸುಮಿತ್ರಾ ಮಾದಿಗ ಅವರನ್ನು ಸತ್ಕರಿಲಾಯಿತು. ಭರತ ಕಲಾಚಂದ್ರ, ಅನುಸೂಯಾ ಬಾಳಪ್ಪಗೋಳ ಇದ್ದರು. ಪ್ರೊ. ಸಾರಿಕಾ ಪಾಟೀಲ ಸ್ವಾಗತಿಸಿದರು. ಡಾ. ಶಾಂತಾ ಬಂಗಾರಿ ನಿರೂಪಿಸಿದರು. ಆರ್.ಕೆ. ಕಬ್ಬೂರೆ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

