ಬೆಳಗಾವಿ: ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರ ನಿರ್ದೇಶಕ ಕೇಸರಿ ಹರವೂ ಅವರ ನಗರ ಮತ್ತು ನದೀ ಕಣಿವೆ ಸಾಕ್ಷ್ಯ ಚಿತ್ರಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ಮಾ.21 ರಂದು ಸಂಜೆ 5.30ಕ್ಕೆ ನಗರದ ಜಿಲ್ಲಾಧಿಕಾರಿ ಆವರಣದಲ್ಲಿರುವ ಕೇಂದ್ರ ಗ್ರಂಥಾಲಯದಲ್ಲಿ ನಡೆಯಲಿದೆ. ನಿರ್ದೇಶಕ ಕೇಸರಿ ಹರವೂ ಭಾಗವಹಿಸುವರು. ಕಾರ್ಯಕ್ರಮವನ್ನು ನಗರದ ರಂಗಸಂಪದ, ಅಜಂತಾ ಫಿಲ್ಮ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದೆ.