ಕ.ಪ್ರ. ವಾರ್ತೆ ಬೆಳಗಾವಿ ಮಾ.29
ತಮ್ಮ ಅಂಗರಕ್ಷಕನ ರಿವಾಲ್ವರ್ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿನಿಂದ ತೀವ್ರವಾಗಿ ಗಾಯಗೊಂಡಿದ್ದ ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ್ ಅವರನ್ನು ಶುಕ್ರವಾರ ಏರ್ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ನರಗುಂದ ಮತಕ್ಷೇತ್ರ ವ್ಯಾಪ್ತಿಯ ರೋಣ ತಾಲೂಕಿನ ಮೆಣಸಗಿಯಲ್ಲಿ ಕಳೆದ ಮಾ.17 ರಂದು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದಾಗ ನಡೆದ ಸಣ್ಣ ಗಲಾಟೆಯಲ್ಲಿ ಅಂಗರಕ್ಷಕನ ರಿವಾಲ್ವರ್ನಿಂದ ಸಿಡಿದ ಗುಂಡು ಪಾಟೀಲರನ್ನು ತೀವ್ರ ಘಾಸಿ ಗೊಳಿಸಿತ್ತು. ಅಂದು ರಾತ್ರಿಯೇ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮಾ.18ರಂದು ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಅವರು ಚೇತರಿಸಿಕೊಂಡು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅವರ ಬಯಕೆಯಂತೆ ಪಾಟೀಲರನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಅಲ್ಲಿ ಮತ್ತೊಮ್ಮೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅಗತ್ಯ ಚಿಕಿತ್ಸೆ ನೀಡಲಾಗುತ್ತದೆ. ಸಿ.ಸಿ. ಪಾಟೀಲ್ ಎಲ್ಲರೊಂದಿಗೆ ಮಾತನಾಡುತ್ತಿದ್ದಾರೆ ಎಂದು ಕೆಎಲ್ಇ ಆಸ್ಪತ್ರೆಂು ಡಾ.ಎಂ.ಎಸ್.ಗೋಧಿ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ್ದ ವಿಶೇಷ ಏರ್ ಆ್ಯಂಬುಲೆನ್ಸ್ದಲ್ಲಿ ಸಾಂಬ್ರಾ ವಿಮಾನ ನಿಲ್ದಾಣದ ಮೂಲಕ ಅವರನ್ನು ಬೆಂಗಳೂರಿಗೆ ಕಳುಹಿಸಲಾಯಿತು ಎಂದು ಅವರು ಹೇಳಿದ್ದಾರೆ.