ಬೆಳಗಾವಿ: ಬೆಳಗಾವಿ ವಿಭಾಗದ ಪೊಲೀಸ್ ಲೋಕಾಯುಕ್ತ ಅಧಿಕಾರಿಗಳು ಏ.25ರಿಂದ ಮೂರು ದಿನಗಳ ಕಾಲ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಲೋಕಾಯುಕ್ತರು, ಏ.25 ರಂದು ಬೆಳಗ್ಗೆ 11ಗಂಟೆಗೆ, ಮಧ್ಯಾಹ್ನ್ನ 1ಗಂಟೆಯವರೆಗೆ ಗೋಕಾಕ ಪ್ರವಾಸಿ ಮಂದಿರದಲ್ಲಿ, ಅಂದು ಬೆಳಗ್ಗೆ 11 ರಿಂದ ಮಧ್ಯಾಹ್ನ್ನ 1 ಗಂಟೆಯವರೆಗೆ ಹುಕ್ಕೇರಿ ಪ್ರವಾಸಿ ಮಂದಿರದಲ್ಲಿ, ಅಂದು ಮಧ್ಯಾಹ್ನ್ನ 3 ರಿಂದ ಸಂಜೆ 5 ಗಂಟೆಯವರೆಗೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ, ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಥಣಿ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸುವರು.
ಏ.26ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ಗಂಟೆಯವರೆಗೆ ರಾಯಬಾಗ ಪ್ರವಾಸಿ ಮಂದಿರದಲ್ಲಿ, ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಲಹೊಂಗಲ ಪ್ರವಾಸಿ ಮಂದಿರದಲ್ಲಿ, ಬೆಳಗ್ಗೆ 11 ರಿಂದ ಮಧ್ಯಾಹ್ನ್ನ 1 ಗಂಟೆಯವರೆಗೆ ಖಾನಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕಿತ್ತೂರ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಏ.28 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ್ನ 1 ಗಂಟೆಯವರೆಗೆ ರಾಮದುರ್ಗ ಪ್ರವಾಸಿ ಮಂದಿರದಲ್ಲಿ ಹಾಗೂ ಅಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಸವದತ್ತಿ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ 0831-2421550ಕ್ಕ ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.