ಬೆಳಗಾವಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ದಲಿತರ ಮನೆಯಲ್ಲಿ ಹನಿಮೂನ್ ಮಾಡುತ್ತಾರೆ ಎಂದು ಯೋಗ ಗುರು ಬಾಬಾ ರಾಮದೇವ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಮಂಗಳವಾರ ಬೆಳಗಾವಿ ಬಂದ್ಗೆ ಕರೆ ನೀಡಿದೆ. ಬೆಳಗ್ಗೆ 9ರಿಂದ ಸಂಜೆ 6ಗಂಟೆಯ ವರೆಗೆ ಆಸ್ಪತ್ರೆ, ಔಷಧ ಅಂಗಡಿ, ಹಾಲಿನ ಅಂಗಡಿ ಹೊರತುಪಡಿಸಿ ಎಲ್ಲ ಅಂಗಡಿ ಮುಗ್ಗಟ್ಟು ಬಂದ್ ಮಾಡುವ ಮೂಲಕ ಶಾಂತಿಯುತ ಬಂದ್ಗೆ ಸಹಕರಿಸಬೇಕೆಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.