ಬೆಳಗಾವಿ: ಹತ್ತು ವರ್ಷದ ಬಾಲಕಿ ಮೇಲೆ ಸ್ವಂತ ತಂದೆಯೇ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಈ ಕುರಿತು ಪತ್ನಿ ಅತ್ಯಾಚಾರಕ್ಕೆ ಒಳಗಾಗಿರುವ ಮಗಳ ಸಮೇತ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಉದ್ಯಮಭಾಗ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿರುವ ತಂದೆ ಶನಿವಾರ ರಾತ್ರಿ ಈ ಕೃತ್ಯ ಎಸಗಿದ್ದಾನೆ. ಭಾನುವಾರ ಬೆಳಗ್ಗೆ ರಕ್ತಸ್ರಾವದಿಂದ ಬಳಲುತ್ತಿದ್ದ ಮಗಳಲ್ಲಿ ವಿಚಾರಿಸಿದಾಗ ಅತ್ಯಾಚಾರದ ವಿಚಾರ ಬಹಿರಂಗವಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಕಾಮುಕ ತಂದೆಗೆ ಹಿಗ್ಗಾ-ಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement