ನಿಪ್ಪಾಣಿ: ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಸಭೆ 19ರಂದು ಮಧ್ಯಾಹ್ನ 2 ಗಂಟೆಗೆ ಇಲ್ಲಿನ ಮರಾಠಾ ಮಂಡಳದ ಸಾಂಸ್ಕೃತಿಕ ಭವನದಲ್ಲಿ ಜರುಗಲಿದೆ.
ಸಭೆಯಲ್ಲಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಶಾಸಕರಾದ ಉಮೇಶ ಕತ್ತಿ, ಲಕ್ಷ್ಮಣ ಸವದಿ, ರಾಜು ಕಾಗೆ, ದುರ್ಯೋಧನ ಐಹೊಳೆ, ಶಾಸಕಿ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸುಭಾಷ ಜೋಶಿ, ಧುರೀಣರಾದ ಬಿ.ಆರ್.ಸಂಗಪ್ಪಗೋಳ, ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬಾಬಾಸಾಹೇಬ ಸಾಸನೆ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ಮತ್ತು ನಗರಸಭೆಯ ಸದಸ್ಯರು ಈ ಸಭೆಯಲ್ಲಿ ಉಪಸ್ಥಿತರಿರುವರು ಎಂದು ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.