ತಾಂತ್ರಿಕ ವಿದ್ಯಾರ್ಥಿಗಳು ಸಮಾಜಮುಖಿ ಆಗಬೇಕು
ಹೊಸಪೇಟೆ: ತಾಂತ್ರಿಕ ವಿದ್ಯಾರ್ಥಿಗಳು ಸಮಾಜಮುಖಿಗಳಾಗಿ ಗುರುತಿಸಿಕೊಳ್ಳುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅರ್. ಬಸಪ್ಪ ಕರೆ ನೀಡಿದರು.
ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ಹಮ್ಮಿಕೊಂಡಿದ್ದ ವಂಡರ್ಸ್ - 13 ಎಂಬ ಎರಡು ದಿನಗಳ ರಾಜ್ಯ ಮಟ್ಟದ ತಾಂತ್ರಿಕ-ಸಾಂಸ್ಕೃತಿಕ ಉತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಭಾರತೀಯ ತಂತ್ರಜ್ಞರ ಸೇವೆಗೆ ವಿದೇಶಗಳಲ್ಲಿ ತೀವ್ರ ಬೇಡಿಕೆಯಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು. ಸಮಾಜಕ್ಕೆ ನೆರವಾಗುವ ಆವಿಷ್ಕಾರಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಭಾರತದ ಹಿರಿಮೆಯನ್ನು ಎತ್ತಿ ಹಿಡಿಯಬೇಕು ಎಂದರು.
ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರು ಬಸವರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಬೆಳಕಿಗೆ ತರಲು ಸೂಕ್ತ ವೇದಿಕೆಯಾಗಿವೆ ಎಂದರು.
ವೀ.ವಿ. ಸಂಘದ ಗೌರವ ಕಾರ್ಯದರ್ಶಿ ಎಚ್.ಎಂ. ಗುರುಸಿದ್ಧ ಸ್ವಾಮಿ, ಸಹಕಾರ್ಯದರ್ಶಿ ಜೆ.ಎಸ್. ನೇಪಾಕ್ಷಪ್ಪ ಸಂಗನಕಲ್, ಕೋಶಾಧಿಕಾರಿ ಎಸ್. ಹಿಮಂತರಾಜ, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಅರವಿ ಬಸವನ ಗೌಡ, ಆಡಳಿತ ಮಂಡಳಿಯ ಸದಸ್ಯ ಕೆ.ಬಿ. ಶ್ರೀನಿವಾಸ ರೆಡ್ಡಿ, ಬಳ್ಳಾರಿಯ ಅರ್ವೈಎಂಇಸಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ವಿ. ಬಸವರಾಜ್, ಉದ್ಯಮಿ ತಿರುಪತಿ ರೆಡ್ಡಿ, ಪ್ರಾಂಶುಪಾಲ ಪ್ರೊ. ಪಾರ್ವತಿ ಕಡ್ಲಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ. ಜಿ.ವಸಂತಮ್ಮ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡಲು ರು. 50 ಸಾವಿರ ದೇಣಿಗೆ ನೀಡಿದ ಎಂಜಿನಿಯರ್ ಅರ್. ಬಸಪ್ಪ ಅವರನ್ನು ಸಮಾರಂಭದಲ್ಲಿ ಸನ್ಮಾನಿ ಗೌರವಿಸಲಾಯಿತು. ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಿಂದ ಸುಮಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

