ಬಳ್ಳಾರಿ

ಮಾದರಿ ಕ್ಷೇತ್ರವನ್ನಾಗಿಸುವೆ: ರಾಣಿ ಸಂಯುಕ್ತ

Published On :

ಹೊಸಪೇಟೆ: ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ಸಾರ್ ಕಾಂಗ್ರೆಸ್‌ನಿಂದ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಮಹಿಳೆಯರ ಸಮಸ್ಯೆಗಳಿಗೆ ಹೆಚ್ಚಿನ ಆಧ್ಯತೆ ನೀಡಿ, ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ರೂಪಿಸಲಾಗುವುದು ಎಂದು ಬಿಎಸ್ಸಾರ್ ಅಭ್ಯರ್ಥಿ ರಾಣಿ ಸಂಯುಕ್ತ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಎಸ್ಸಾರ್ ಸಂಸ್ಥಾಪಕ ಬಿ. ಶ್ರೀರಾಮುಲು ಅವರ ರಾಜಕೀಯ ಹಾಗೂ ಸಮಾಜ ಸೇವೆ ನಮಗೆ ಶ್ರೀರಕ್ಷೆಯಾಗಲಿದೆ. ತಮ್ಮ ಮೇಲೆ ನಂಬಿಕೆ ಇಟ್ಟು ಪಕ್ಷದಿಂದ ಸ್ಪರ್ಧಿಸುವಂತೆ ಟಿಕೆಟ್ ನೀಡಿದ್ದಾರೆ. ಈಗಾಗಲೇ 4 ದಿನಗಳಿಂದ ಕ್ಷೇತ್ರದ ವಿವಿಧೆಡೆ ಭೇಟಿ ನೀಡಿ ಮತದಾರರೊಂದಿಗೆ ಚರ್ಚಿಸಿದ್ದು, ಮತದಾರರು ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಮತದಾರರ ಬೆಂಬಲದಿಂದಾಗಿ ಈ ಚುನಾವಣೆಯಲ್ಲಿ ಖಂಡಿತವಾಗಿ ನಮಗೆ ಗೆಲವು ಸಿಗಲಿದೆ ಎಂದರು.
16ರಂದು ನಾಮಪತ್ರ: ಏ. 16ರಂದು ನಾಮಪತ್ರ ಸಲ್ಲಿಸುತ್ತಿದ್ದು, 20ರಿಂದ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಾಗುತ್ತದೆ. ಕ್ಷೇತ್ರದಲ್ಲಿ ಮಹಿಳೆಯರ ಸಮಸ್ಯೆಗಳು ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಮಹಿಳೆಯರಿಗೆ ಶೌಚಾಲಯ, ಕುಡಿಯುವ ನೀರಿನ ಸಮಸ್ಯೆ, ಆಶ್ರಯ ಮನೆಗಳ ನಿರ್ಮಾಣ, ವಿದ್ಯಾರ್ಥಿಗಳ ಸಮಸ್ಯೆಗಳಿ ಸ್ಪಂದಿಸಲಾಗುತ್ತದೆ. ನಗರದಲ್ಲಿರುವ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ತಿಳಿಸಿದರು.
ಹಿಂದೆ ಸರಿಯುವುದಿಲ್ಲ: ಎಲ್ಲರೂ ಒಂದುಗೂಡಿ ಪಕ್ಷ ಸಂಘಟನೆ ಮಾಡುವ ಜೊತೆಗೆ ಈ ಚುನಾವಣೆಯನ್ನು ಅತ್ಯಂತ ಪ್ರತಿಷ್ಠೆಯಾಗಿ ಸ್ಪೀಕರಿಸಿ ಅಭ್ಯರ್ಥಿಗಳ ಗೆಲವಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇವೆ. ಇಲ್ಲಿ ತಮ್ಮ ವಿರುದ್ಧ ಯಾರೇ ಸ್ಪರ್ಧಿಸಿದರೂ ನಮ್ಮ ಗೆಲವು ಖಚಿತ. ಯಾವುದೇ ಕಾರಣಕ್ಕೂ ಈ ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕುಟುಂಬದ ಸಂಬಂಧ ಬೇರೆ, ರಾಜಕೀಯವೆ ಬೇರೆ. ಬಿಎಸ್ಸಾರ್ ಅಭ್ಯರ್ಥಿಯಾಗಿ ಈಗಾಗಲೆ ಗುರುತಿಸಿಕೊಂಡಿದ್ದು, ಈ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಗೆಲವು ಸಾಧಿಸುತ್ತೇನೆ. ನನ್ನ ಹೆಸರಲ್ಲಿ ಯಾವುದೆ ಗಣಿಗಾರಿಕೆಯಾಗಲಿ ಅಥವಾ ಟ್ರೇಡರ್ಸ್ ಆಗಲಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಎಸ್ಸಾರ್‌ನ ಜಂಬಾನಹಳ್ಳಿ ವಸಂತಕುಮಾರ್, ಕಟಗಿ ರಾಮಕೃಷ್ಣ, ವ್ಯಾಸನಕೆರೆ ಶ್ರೀನಿವಾಸ, ದೇವರಮನಿ ಶ್ರೀನಿವಾಸ, ಪಿ. ವೆಂಕಟೇಶ್, ಎಸ್. ಗಾಳೆಪ್ಪ, ಶ್ರೀಧರ್ ನಾಯ್ಡು, ಗೋವಿಂದ ರಾಜ್, ಸೈಯದ್ ಮೀರ್‌ಜಾಫರ್, ರಾಮಾಂಜಿನಿ, ಖಲಂದರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.