ಬಳ್ಳಾರಿ

ವಿನೂತನ ಜಾಗೃತಿ ಫಲಕ ಅಳವಡಿಕೆ

Published On :

ಬಳ್ಳಾರಿ: ಮೇ 5ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಅಂಗವಾಗಿ ಮತದಾರರಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗವು, ಜಿಲ್ಲಾದ್ಯಂತ ಖ್ಯಾತನಾಮರ ಭಾವಚಿತ್ರವಿರುವ ಫಲಕಗಳನ್ನು ಅಳವಡಿಸುವ ಮೂಲಕ ವಿನೂತನ ರೀತಿ ಜಾಗೃತಿಗೆ ಮುಂದಾಗಿದೆ.
ವಾರ್ತಾ ಮತ್ತು ಪ್ರಸಾರ ಇಲಾಖೆ ಸಹಯೋಗದಲ್ಲಿ ಹೊರತರಲಾಗಿರುವ ಈ ಫಲಕಗಳಲ್ಲಿ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂರ ಭಾವಚಿತ್ರ ಹಾಗೂ ರವೀಂದ್ರನಾಥ ಟ್ಯಾಗೋರರ ಸಂದೇಶ ಹಾಗೂ ಸ್ಫೂರ್ತಿಯುತ ಚಿತ್ರವಿರುವ ಫಲಕ, ಚಿತ್ರನಟ ಪುನೀತ್ ರಾಜಕುಮಾರ್, ನಟಿ ಐಂದ್ರಿತಾ ರೇ, ಬ್ಯಾಡ್ಮಿಂಟನ್ ಪಟು ಸೈನಾ ನೆಹ್ವಾಲ್, ಬಾಕ್ಸರ್ ಮೇರಿ ಕೋಮ್ ಅವರ ಭಾವಚಿತ್ರಗಳು ಯುವಜನರನ್ನು ಸೆಳೆಯುತ್ತಿವೆ.
'ನಿಮ್ಮ ಆಯ್ಕೆ ಸೂಕ್ತವಾಗಿರಲಿ ಯೋಚಿಸಿ ಮತ ಚಲಾಯಿಸಿ' ಎಂದು ಎಪಿಜೆ ಅಬ್ದುಲ್ ಕಲಾಂ ಅವರು ಕೋರಿರುವ ಫಲಕದಲ್ಲಿ, 'ಆಮಿಷಕ್ಕೆ ಒಳಗಾಗದಿರಿ' ಎಂಬ ಅಡಿಬರಹವನ್ನು ಸಹ ಸೇರಿಸಲಾಗಿದೆ. ಜಿಲ್ಲೆಯ ಯಾವುದೇ ಮತದಾರ ಮತದಾನದಿಂದ ದೂರ ಉಳಿಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಮತದಾರರ ಗುರುತಿನ ಚೀಟಿ ನೀಡಲು ನೋಂದಣಿ ಕಾರ್ಯ ಭರದಿಂದ ಸಾಗಿದೆ. ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ಚುನಾವಣಾ ಆಯೋಗವು ವಿಶೇಷ ಗಮನ ನೀಡತ್ತಿದ್ದು, ಈ ಬಾರಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥ ಹಾಗೂ ಜಿಪಂ ಸಿಇಓ ಮಂಜುನಾಥ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.