ತುಕಾರಾಂ ಅವಧಿಯಲ್ಲಿ ಅಭಿವೃದ್ಧಿ ಶೂನ್ಯ
ಸಂಡೂರು: ಶಾಸಕ ಈ. ತುಕಾರಾಂ 5 ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಕೈಗೊಂಡಿಲ್ಲ. ಇದರಿಂದಾಗಿ ಕ್ಷೇತ್ರದ ಜನತೆ ತೀವ್ರ ನಿರಾಸೆಗೊಂಡಿದ್ದಾರೆ ಎಂದು ಬಿಎಸ್ಸಾರ್ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಜಿ. ಚಿನ್ನಬಸಪ್ಪ ಆರೋಪಿಸಿದರು.
ಅವರು ಭಾನುವಾರ ತೋರಣಗಲ್ಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ಬಸಾಪುರ, ಲಕ್ಕಲಹಳ್ಳಿ, ಕೊಡಾಲು, ತೋರಣಗಲ್ಲು ಸೇರಿದಂತೆ ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿಗಾಗಿ ಜನತೆ ಪರಿತಪಿಸುತ್ತಿದ್ದಾರೆ. ಮುಖ್ಯ ರಸ್ತೆಗಳು ಸೇರಿ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳು ಸಹ ಹದಗೆಟ್ಟಿವೆ. ಆಸ್ಪತ್ರೆಗಳು ನಿರುಪಯುಕ್ತವಾಗಿವೆ ಎರಡು ವರ್ಷಗಳ ಬರದಿಂದ ರೈತರು ಕಂಗೆಟ್ಟಿದ್ದಾರೆ. ಶಾಸಕರ ಅನುದಾನ, ನಕ್ಸಲ್ ಪೀಡಿತ ಪ್ರದೇಶಾಭಿವೃದ್ಧಿ, ಹೈದರಾಬಾದ್ ಪ್ರೇದೇಶಾಭಿವೃದ್ಧಿ ನಿಧಿಗಳು ಸೇರಿ ಕೋಟ್ಯಂತರ ರುಪಾಯಿ ಸರ್ಕಾರದಿಂದ ಅನುದಾನ ಹರಿದು ಬಂದಿದ್ದರೂ ಅಭಿವೃದ್ಧಿಯನ್ನು ಶಾಸಕರು ಮಾಡಿಲ್ಲ ಎಂದು ದೂರಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ಸ್ಥಳಿಯ ಶಾಸಕರನ್ನು ಜನತೆ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಈ ಚುನಾವಣೆಯಲ್ಲಿ ಕ್ಷೇತ್ರದ ಜನ ಕಾಂಗ್ರೆಸ್ ಪಕ್ಷ ಮತ್ತು ಸ್ಥಳೀಯ ಶಾಸಕರಿಗೆ ತಕ್ಕಪಾಠ ಕಲಿಸಲಿದ್ದಾರೆ. ಬಿಎಸ್ಸಾರ್ ಪಕ್ಷಕ್ಕೆ ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕ್ಷೇತ್ರದ ಮತದಾರರು ಈ ಬಾರಿ ತಮ್ಮನ್ನು ಗೆಲ್ಲಿಸುವರೆಂಬ ಭರವಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ
ಮುಖಂಡ ಗೌರಿಶಂಕರಗೌಡ, ಜಿ. ಸಣ್ಣಬಸಪ್ಪ, ದುರುಗಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

