ಬಳ್ಳಾರಿ

ವಸತಿ ಪ್ರೌಢಶಾಲೆ ಪಿಯು ಕಾಲೇಜಾಗಿ ಮಾರ್ಪಾಡು

Published On :

ಹೊಸಪೇಟೆ: ಕಸ್ತೂರಿ ಬಾ ವಸತಿ ಪ್ರೌಢಶಾಲೆಯನ್ನು ಪಿಯುಸಿವರೆಗೆ ವಿಸ್ತರಿಸಿ, ಪಿಯು ಕಾಲೇಜಾಗಿ ಪರಿವರ್ತಿಸುವ ಪ್ರಯತ್ನ ಸರ್ಕಾರದ ಮಟ್ಟದಲ್ಲಿ ನಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ತಿಳಿಸಿದರು.
ತಾಲೂಕಿನ ಕಮಲಾಪುರದ ಕಸ್ತೂರಿ ಬಾ ವಸತಿ ಶಾಲೆ 8ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನ ಕಸ್ತೂರಿ ಬಾ ವಸತಿ ಶಾಲೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಲ್ಲಿಯ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದಾರೆ. ಇದಕ್ಕೆ ಶಿಕ್ಷಕರ ಪರಿಶ್ರಮವೂ ಕಾರಣ. ರಾಜ್ಯ ಮಟ್ಟದ ಕೆಲವು ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿದ್ದು ಶ್ಲಾಘನೀಯ ಎಂದರು.
ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳುವ ಭಾಗವಾಗಿ ಕಸ್ತೂರಿ ಬಾ ವಸತಿ ಶಾಲೆ ಆರಂಭವಾಗಿದೆ. ಮೊದಲು ಎಡರು-ತೊಡರುಗಳಿದ್ದವು. ಈಗ ಅದನ್ನು ಎದುರಿಸಿ ಮಾದರಿ ಶಾಲೆಯಾಗಿದೆ ಎಂದರು.
ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ. ಕೆ.ಎಂ. ಮೇತ್ರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳು ಕಲುಷಿತವಾಗಿವೆ. ಜನರು ಉನ್ನತ ಶಿಕ್ಷಣ ಪಡೆದರೂ ಇಂತಹ ವಾತಾ ರಣ ನಿರ್ಮಾಣವಾಗಿರುವುದು ಶೋಚನೀಯ ಸಂಗತಿ. ಶಿಕ್ಷಣ ಕ್ಷೇತ್ರ ಕಲುಷಿತಗೊಳ್ಳದಂತೆ ವಿದ್ಯಾರ್ಥಿಗಳು, ಶಿಕ್ಷಕರು ಪ್ರಯತ್ನಿಸಬೇಕು. ಶಾಲೆ ಬಿಟ್ಟ ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ಅವರ ಉನ್ನತ ಶಿಕ್ಷಣಕ್ಕೂ ಅನುಕೂಲ ಮಾಡಿಕೊಡಬೇಕಿದೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಂಭೀರ ಚಿಂತನೆ ನಡೆಸಬೇಕಿದೆ ಎಂದರು.
ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಕುರಿತು ಕಸ್ತೂರಿ ಬಾ ಶಾಲೆ ಮುಖ್ಯ ಶಿಕ್ಷಕಿ ಲಲಿತಮ್ಮ ಮಾತನಾಡಿದರು. ಶಿಕ್ಷಣ ಇಲಾಖೆಯ ಮೇಘಾ ನಾಯ್ಕ, ಸಿಆರ್‌ಪಿ ಹನುಮಂತಪ್ಪ, ತಾಲೂಕು ಶಿಕ್ಷಕರ ಸಂಘದ ಬಸವರಾಜ, ಮುಖ್ಯ ಶಿಕ್ಷಕ ಸಣ್ಣವೀರಪ್ಪ, ನೋಡಲ್ ಅಧಿಕಾರಿ ಬಿ. ವೆಂಕೋಬ ನಾಯಕ್ ಇತರರು ಇದ್ದರು.
ಶಿಕ್ಷಕ ಅನ್ವರ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಯೋಗ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ನಂದಿನಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದ ನಾಟಕ ತಂಡವನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.