ಬಳ್ಳಾರಿ

ಸಂಭ್ರಮದ ಗುರು ಕೊಟ್ಟೂರೇಶ್ವರ ರಥೋತ್ಸವ

Published On :

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಏ. 12
ತಾಲೂಕಿನ ಮಾಗಳ ಗ್ರಾಮದಲ್ಲಿ ಯುಗಾದಿ ಹಬ್ಬದ ದಿನ ಗುರು ಕೊಟ್ಟೂರೇಶ್ವರ ರಥೋತ್ಸವ ಗುರುವಾರ ಸಂಭ್ರಮದಿಂದ ನಡೆಯಿತು. ತುಂಗಭದ್ರಾ ನದಿಯಿಂದ ಕುಂಭದಲ್ಲಿ ನೀರು ತಂದು ದೇವರಿಗೆ ಅಭಿಷೇಕ ಮಾಡಲಾಯಿತು.
ಇದೇ ಸಂದರ್ಭದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 5 ಜೋಡಿ ನವ ಜೀವನಕ್ಕೆ ಕಾಲಿಟ್ಟಿತು. ಕಾರ್ಯಕ್ರಮದ ಸಾನ್ನಿಧ್ಯವನ್ನು ಅಂಗೂರು ಹಿರೇಮಠದ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು. ಬಳಿಕ ಆಶೀರ್ವಚನ ನೀಡಿದ ಅವರು, ಜಾತ್ರೆ ಸಂದರ್ಭದಲ್ಲಿ ಇಂತಹ ಸಾಮೂಹಿಕ ವಿವಾಹ ಆಯೋಜಿಸಿರುವುದು ಉತ್ತಮ ಕೆಲಸ ಎಂದರು. ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು. ಇಂತಹ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯ ಎಂದ ಅವರು, ನವ ದಂಪತಿಗಳು ಗುರು-ಹಿರಿಯರಿಗೆ ಗೌವರ ಕೊಟ್ಟು, ಸಮಾಜ ಮೆಚ್ಚುವಂತಹ ರೀತಿಯಲ್ಲಿ ಬಾಳಬೇಕು ಎಂದು ಸಲಹೆ ನೀಡಿದರು.
ಇದಕ್ಕೂ ಮುನ್ನ ಗ್ರಾಮದ ಮುಖ್ಯ ಬೀದಿಗಳಲ್ಲಿ ಸಕಲ ವಾದ್ಯಗಳೊಂದಿಗೆ ಎತ್ತಿನ ಮೆರವಣಿಗೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ಅಧ್ಯಕ್ಷ ಪಿ.ಎಂ. ವಿಜಯಕುಮಾರ, ಬಿ.ಎಂ. ವೀರಯ್ಯ, ಉಪಾಧ್ಯಕ್ಷ ಬಾಗಳಿ ಶಿವಪುತ್ರಪ್ಪ, ರಾಮನಗೌಡ, ಎಲ್. ರೇಣುಕಪ್ಪ, ಎಲ್. ಮಂಜುನಾಥ, ರಂಗಾಪುರ ಕೋಟೆಪ್ಪ, ಇದ್ಲಿ ಗೋಣೆಪ್ಪ, ವಸ್ತ್ರದ ವೀರಯ್ಯ, ತೋಟರ ದ್ಯಾಮಜ್ಜ, ಪಾಟೀಲ್ ರಾಮನಗೌಡ, ಶೇಖರಗೌಡ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.