ಅಂಬೇಡ್ಕರ್ ಸಿದ್ಧಾಂತ ಪಾಲಿಸಿ
ಹೊಸಪೇಟೆ: ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಪಾಲಿಸಿದಾಗ ಮಾತ್ರ ದಲಿತರ ಅಭಿವೃದ್ಧಿ ಸಾದ್ಯ ಎಂದು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಐಸಾಕ್ ಅರುಳ್ ಸೆಲ್ವ ಹೇಳಿದರು.
ನಗರದ ಯಾತ್ರಿ ನಿವಾಸದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಹೊಸಪೇಟೆ ಸ್ಲಂ ಜನಜಾಗೃತಿ ಆಂದೋಲನ ಸಮಿತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್ ಅವರ 122ನೇ ಜಯಂತಿ ಹಾಗೂ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ದೇಶದ ಎಲ್ಲ ಸಮುದಾಯದವರಿಗೂ ಸಮಪಾಲು ಸಮಬಾಳು ಸಿಕ್ಕಾಗ ಮಾತ್ರ ದಲಿತ ಸಮುದಾಯಗಳಿಗೆ ಸಮಾಜಿಕ ನ್ಯಾಯ ಸಿಗಲು ಸಾಧ್ಯ ಎಂದಿದ್ದರು. ದೇಶದಲ್ಲಿ ಮೇಲ್ವರ್ಗದ ಜನರು ಹಾಗೂ ಬಂಡವಾಳಶಾಹಿಗಳು ತಮ್ಮ ಉದ್ಧಾರಕ್ಕಾಗಿ ದಲಿತ ವರ್ಗವನ್ನು ಬಳಿಸಿಕೊಳ್ಳುತ್ತಿರುವುದರಿಂದ ಅನೇಕ ಸ್ಲಂಗಳು ಸೃಷ್ಟಿಯಾಗುತ್ತಿದ್ದು, ಜಾತಿಯತೆಗಳು ಸಹ ಹೆಚ್ಚಾಗಿ ನಡೆಯುತ್ತಿರುವುದರಿಂದ ಹಳ್ಳಿಗಳ ಕೇರಿಗಳಲ್ಲಿ ಜನರ ಬದುಕು ದುಸ್ತರವಾಗಿದೆ. ಕೇರಿಗಳು ಸಹ ಅಭಿವೃದ್ಧಿಗೊಂಡು ಪ್ರತಿಯೊಬ್ಬರು ವಿದ್ಯಾವಂತರಾದಾಗ ಮಾತ್ರ ಸ್ಲಂಗಳು ಅಭಿವೃದ್ಧಿಯಾಗಲು ಸಾಧ್ಯ ಎಂದರು.
ಪ್ರಾಧ್ಯಾಪಕ ಎಸ್. ಬಿ. ಚಂದ್ರಶೇಖರ್ ಮಾತನಾಡಿ, ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸುವಾಗ ಈ ಸಂವಿಧಾನವು ಅನುಷ್ಠಾನಕ್ಕೆ ಬಂದಲ್ಲಿ ಕೇವಲ 10 ವರ್ಷಗಳಲ್ಲಿ ಈ ದೇಶದಲ್ಲಿ ಬಡತನವೇ ಇರುವುದಿಲ್ಲ ಎಂದು ತಿಳಿಸಿದ್ದರು. ಆದರೆ ಸ್ವಾತಂತ್ರ್ಯ ಬಂದು 60 ವರ್ಷಗಳು ಕಳೆದರೂ ದಲಿತರ ಸ್ಥಿತಿ ಇನ್ನು ಸುಧಾರಿಸಿಲ್ಲ. ದಲಿತರು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ಸ್ಲಂ ಜನಜಾಗೃತಿ ಅಂದೋಲನ ಸಮಿತಿ ಮುಖಂಡರಾದ ಮೈಮುನ್ನಿಸಾ, ಎನ್. ಹುಲಿಗಮ್ಮ, ಸಂಪತ್, ಸುನೀಲ್, ರಾಮಚಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

