ಮಾಲ್ವಿ ಡ್ಯಾಂಗೆ ಶಾಶ್ವತ ನೀರು: ಭೀಮಾನಾಯ್ಕ
ಹಗರಿಬೊಮ್ಮನಹಳ್ಳಿ: ಬಿಸಿಲೂರಿನ ಜೀವನಾಡಿ ತಾಲೂಕಿನ ಮಾಲ್ವಿ ಡ್ಯಾಂಗೆ ಶಾಶ್ವತ ನೀರೋದಗಿಸುವ ಯೋಜನೆಯನ್ನು ಜಾರಿಗೊಳಿಸಲು ತಾವು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಎಸ್ಸಾರ್ ಕಾಂಗ್ರೆಸ್ ಅಭ್ಯರ್ಥಿ ಎಸ್. ಭೀಮಾನಾಯ್ಕ ಹೇಳಿದ್ದಾರೆ.
ಪಟ್ಟಣದ ರಾಮನಗರದ ರೈತರ ಓಣಿ, ಅರಳಿಹಳ್ಳಿ, ಕುರುದಗಡ್ಡಿ ಗ್ರಾಮಗಳಲ್ಲಿ ಮನೆ, ಮನೆಗೆ ತೆರಳಿ ಪ್ರಚಾರ ಕಾರ್ಯ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 20 ಸಾವಿರ ಎಕರೆ ಒಣಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುತ್ತಿರುವ ಮಾಲ್ವಿ ಡ್ಯಾಂ ಸದ್ಯ ನೀರಿನ ಬರ ಎದುರಿಸುತ್ತಿದೆ. ಶಾಶ್ವತ ನೀರೋದಗಿಸುವ ಯೋಜನೆ ಜಾರಿಗೊಂಡರೆ ಮಾತ್ರ ಡ್ಯಾಂಗೆ ನೀರಿನ ಬರ ನಿವಾರಣೆಯಾಗಲಿದ್ದು ತಾವು ಅಧಿಕಾರಕ್ಕೆ ಬಂದರೆ ಮಾಲ್ವಿ ಡ್ಯಾಂಗೆ ಶಾಶ್ವತ ನೀರೊದಗಿಸುವ ಯೋಜನೆ ಜಾರಿಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದರು. ತುಂಗಾಭದ್ರಾ ಜಲಾಶಯ ಭರ್ತಿಯಾದ ಸಮಯದಲ್ಲಿ ಪ್ರತಿವರ್ಷ ಸಾಕಷ್ಟು ನೀರು ನದಿಗೆ ವ್ಯರ್ಥವಾಗಿ ಹರಿದು ಸಮುದ್ರ ಸೇರುತ್ತಿದೆ. ಅದೇ ನೀರನ್ನು ಸದ್ಭಳಕೆ ಮಾಡಿಕೊಂಡು ತಾಲೂಕಿನ ಆಯ್ದ ಭಾಗಗಳಲ್ಲಿ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಿರುವೆ ಎಂದರು. ಬಿಎಸ್ಸಾರ್ ಮುಖಂಡ ಸಿನಿಮಾ ಮಂಜಣ್ಣ, ಎಚ್.ಎಂ. ಚೋಳರಾಜ, ಹೂಗಾರ ಮಲ್ಲಣ್ಣ, ಕಡ್ಲಬಾಳು ವೆಂಕಟೇಶ, ನಾಗರಾಜ ಜನ್ನು, ಸಂಪತ್‌ಕುಮಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

