ಬಳ್ಳಾರಿ

ಮೋಸ ಮಾಡಲ್ಲವೆಂದು ರಕ್ತದಲ್ಲಿ ಬರೆದು ಕೊಡುವೆ: ಬಿಎಸ್‌ವೈ

Published On :

ಹೂವಿನಹಡಗಲಿ: ರಾಜ್ಯದ ಮತದಾರರು ಕೆಜೆಪಿಗೆ ಬೆಂಬಲಿಸಿದರೆ ಪ್ರಾಮಾಣಿಕ, ಸತ್ಯ, ನಿಷ್ಠೆಯಿಂದ ಕೆಲಸ ಮಾಡುತ್ತೇನೆ. ಬೇಕಾದರೇ ಇದನ್ನು ರಕ್ತದಲ್ಲಿ ಬರೆದು ಕೊಡುತ್ತೇನೆ. ಮತ ನೀಡಿದ ಮತದಾರರಿಗೆ ಮೋಸ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಪಟ್ಟಣದ ಹೊರವಲಯದಲ್ಲಿ ಭಾನುವಾರ ಕೆಜೆಪಿಯ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ಜಾತಿಯಿಂದ ಯಾರೂ ಬೆಳೆಯಲು ಸಾಧ್ಯವಿಲ್ಲ.  ಹಣ, ಹೆಂಡ, ಅಧಿಕಾರ, ಜಾತಿ ವಿಷ ಬೀಜ ಬಿತ್ತಿ ಮತದಾರರಿಗೆ ಮೋಸ ಮಾಡುವ ಜಾಯಮಾನ ನನ್ನದಲ್ಲ. ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್ ನೀಡಿದ್ದೇನೆ. 1 ಲಕ್ಷ ಕೋಟಿ ಬಜೆಟ್ ಏರಿಸಿ, ತೆರಿಗೆ ಸೋರಿಕೆ ತಡೆದು ರಾಜ್ಯವನ್ನು ಸಮಗ್ರ ಅಭಿವೃದ್ಧಿ ಮಾಡಿದ್ದೇನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.