ಕರಾಟೆ ಶಿಕ್ಷಕ ಪಕ್ಷೇತರ ಅಭ್ಯರ್ಥಿ
ಬಳ್ಳಾರಿ: ಮೇ 5ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕರಾಟೆ ಶಿಕ್ಷಕ ಸಿ. ಚಂದ್ರಶೇಖರ ನಾಯ್ಡು ಸ್ಪರ್ಧಿಸಲಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಏ. 17ರಂದು ಬೆಳಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸುವುದಾಗಿ ಅವರು ಹೇಳಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಜನ ಸೇವೆ ಮಾಡುವುದೇ ತಮ್ಮ ಮುಖ್ಯ ಉದ್ದೇಶ. 1995ರಿಂದ ಸತತ ಕರಾಟೆ ತರಬೇತಿ ನೀಡುತ್ತಿದ್ದು, 1997ರಲ್ಲಿ ಕರಾಟೆ ಬ್ಲಾಕ್ಬೆಲ್ಟ್ ಪಡೆದಿರುವುದಾಗಿ ಅವರು ತಿಳಿಸಿದರು. ಅನ್ಯಾಯ, ಭ್ರಷ್ಟಾಚಾರ, ದೌರ್ಜನ್ಯಗಳ ವಿರುದ್ಧ ಹೋರಾಟ ನಡೆಸುವುದು ತಮ್ಮ ಮುಖ್ಯ ಉದ್ದೇಶ. ಎಷ್ಟೇ ಒತ್ತಡಗಳು ಬಂದರೂ ನಾಮಪತ್ರ ಹಿಂಪಡೆಯುವುದಿಲ್ಲ ಎಂದರು. ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಪ್ರಸ್ತುತ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರದಿಂದ ಸ್ಪರ್ಧಿಸಿ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡುವುದಾಗಿ ತಿಳಿಸಿದರು. ಪಕ್ಷೇತರ ಅಭ್ಯರ್ಥಿ ಚಂದ್ರಶೇಖರ ನಾಯ್ಡು ಅವರ ವಿದ್ಯಾರ್ಥಿಗಳಾದ ಕೃಷ್ಣ, ನಜೀರ್, ರಮೇಶ್, ಸೀನಾ, ಕಾರ್ತಿಕ್, ಸ್ನೇಹಿತರಾದ ಗುರುಪ್ರಸಾದ್, ವೆಂಕಟೇಶ್ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

