ಎಂ.ಪಿ. ಪ್ರಕಾಶ್ ಕನಸು ನನಸು ಮಾಡಿ
ಹೂವಿನಹಡಗಲಿ: ಹೂವಿನಹಡಗಲಿ ತಾಲೂಕನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಬೇಕೆಂಬ ಕನಸು ಹೊಂದಿದ್ದ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶ ಅವರ ಕನಸು ನನಸು ಮಾಡಲು ಮತದಾರರು ಪಣ ತೊಟ್ಟು, ಕಾಂಗ್ರೆಸ್ ಬೆಂಬಲಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು. ಸೋಮವಾರ ಇಲ್ಲಿನ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ, ಪಟ್ಟಣದ ಎಂ.ಪಿ. ಪ್ರಕಾಶ ಅವರ ತೋಟದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಜನವಿರೋಧಿ ಆಡಳಿತದಿಂದ ಬೇಸತ್ತ ವಿವಿಧ ಪಕ್ಷಗಳ ಕಾರ್ಯಕರ್ತರು ಈಗ ಕಾಂಗ್ರೆಸ್ ಸೇರುತ್ತಿದ್ದಾರೆ. ಕ್ಷೇತ್ರದ ಮತದಾರರ ಕನಸು ಹಾಗೂ ಅಭಿವೃದ್ಧಿ ಪರ ಚಿಂತನೆಗಳನ್ನು ಜಾರಿಗೆ ತರಲು ಶ್ರಮಿಸುತ್ತೇನೆ ಎಂದು ಅವರು ಭರವಸೆ ನೀಡಿದರು. ಕ್ಷೇತ್ರ ಅಪಾರ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ನಾಮಪತ್ರ ಸಲ್ಲಿಸುವ ವೇಳೆ ಬಂದು ಶುಭ ಹಾರೈಸಿದ್ದಾರೆ. ಕ್ಷೇತ್ರದಿಂದ ಆಯ್ಕೆಯಾದಲ್ಲಿ ಜನರಿಗೆ ಶುದ್ಧ ನೀರು, ಉತ್ತಮ ರಸ್ತೆ, ವಿದ್ಯುತ್ ಕೊರತೆ ನೀಗಿಸುವುದು ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಸಮಗ್ರ ಅಭಿವೃದ್ಧಿ ದೃಷ್ಟಿಕೋನ, ದಕ್ಷ, ಪ್ರಾಮಾಣಿಕತೆಯಿಂದ ಜನರ ಸೇವೆ ಮಾಡುತ್ತೇನೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

