ಬಳ್ಳಾರಿ

ನಂದಿಹಳ್ಳಿ ಹಾಲಪ್ಪ ಕಾಂಗ್ರೆಸ್ ಸೇರ್ಪಡೆ

Published On :

ಹೂವಿನಹಡಗಲಿ: ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತೊರೆದ ಬಗ್ಗೆ ವ್ಯಥೆ ಪಟ್ಟಿದ್ದೇನೆ. ಮತ್ತೆ ಮರಳಿ ಮನೆಗೆ ಬಂದಷ್ಟು ಸಂತೋಷವಾಗಿದೆ ಎಂದರು. ಕಳೆದ ಚುನಾವಣೆಯಲ್ಲಿ ವೈಮನಸ್ಸು ಉಂಟಾಗಿದ್ದರಿಂದ ಬಿಜೆಪಿ ಸೇರಿದ್ದೆ. ಆದರೆ ಶಾಸಕರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿಲ್ಲ. ಆದರಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದರು. ರಾಜ್ಯವನ್ನಾಳಿದ ಭ್ರಷ್ಟ ಬಿಜೆಪಿ ಸರ್ಕಾರ ಧೋರಣೆಗಳಿಂದ ಮನಸ್ಸಿಗೆ ನೋವು ಉಂಟಾಗಿದೆ. ಈ ಹಿಂದೆ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶ ಅವರ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡಬೇಕಾಯಿತು. ಆದರೆ ಎಂಪಿ ಪ್ರಕಾಶ್ ಜತೆ ಕೆಲಸ ಮಾಡುವ ಭಾಗ್ಯ ಕಳೆದುಕೊಂಡಿದ್ದೇನೆ ಎಂಬ ನೋವು ಇದೆ ಎಂದರು. ಎಪಿಎಂಸಿ ಅಧ್ಯಕ್ಷ ವಾರದಗೌಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪರಮೇಶ್ವರಪ್ಪ, ಜಿಪಂ ಸದಸ್ಯ ವಸಂತ, ಅರವಳ್ಳಿ ವೀರಣ್ಣ, ಮೋಹನ್ ರೆಡ್ಡಿ, ಅಭ್ಯರ್ಥಿ ಪಿ.ಟಿ. ಪರಮೇಶ್ವರನಾಯ್ಕ ಉಪಸ್ಥಿತರಿದ್ದರು.
ಅಕ್ರಮ ಮದ್ಯ ವಶ
ಹೊಸಪೇಟೆ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿ ರು. 1600 ಮೌಲ್ಯದ 3.2 ಲೀ ಮದ್ಯದ ಬಾಟಲಿಗಳನ್ನು ಪೊಲೀಸರು ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ನಿವಾಸಿ ಹುಲಿಗೆಮ್ಮ ಹನುಮಂತಪ್ಪ ಎಂಬುವವರನ್ನು ಅಬಕಾರಿ ಇಲಾಖೆಯವರು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.