ಬಳ್ಳಾರಿ

18 ನಾಮಪತ್ರ ಸಲ್ಲಿಕೆ

Published On :

ಬಳ್ಳಾರಿ: ಮಂಗಳವಾರ ಒಟ್ಟು 18 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಬಿ. ಈರಣ್ಣ, ಬಳ್ಳಾರಿ ನಗರ ಕ್ಷೇತ್ರಕ್ಕೆ ಪಿರಮಿಡ್ ಪಾರ್ಟಿ ಆಫ್ ಇಂಡಿಯಾದ ವೈ. ಅರುಣಾಚಲಂ, ಸಿಪಿಐನಿಂದ ಕೆ. ನಾಗಭೂಷಣರಾವ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ)ದಿಂದ ಪೃಥ್ವಿರಾಜ್, ಲೋಕ ಜನಶಕ್ತಿ ಪಾರ್ಟಿಯಿಂದ ಕೆ. ಆನಂದ್, ಪಕ್ಷೇತರರಾಗಿ ಎ. ನಾಟರಾಜ್, ಡಿ. ಪಾರ್ಥಸಾರರ್ಥಿ, ಬಿ. ಜಯಮ್ಮ, ಸೈಯದ್ ನಜೀರ್ ಅಹಮದ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಏ. 15ರಂದು ಬಳ್ಳಾರಿ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಬಿಎಸ್ಸಾರ್ ಅಭ್ಯರ್ಥಿಗಳು ಪರವಾನಗಿ ಪಡೆಯದೆ ಮೆರವಣಿಗೆ, ವಾಹನ ಉಪಯೋಗ, ಸಂಚಾರಿ ನಿಯಮ ಉಲ್ಲಂಘನೆ ಮತ್ತು ಬಾವುಟಗಳನ್ನು ಉಪಯೋಗಿಸಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏ. 15ರಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರೂರು ಗ್ರಾಪಂ ವ್ಯಾಪ್ತಿಯ ಎಸ್. ಶ್ರೀನಿವಾಸುಲು ಎನ್ನುವವರು ಬ್ಲ್ಯೂ ಟ್ರೀ ಮದ್ಯ ಮಾರಾಟ ಮಾಡುವ ಮಳಿಗೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಬ್ರಾಂದಿ ಬಾಟಲಿಗಳನ್ನು ಅಬಕಾರಿ ಇಲಾಖೆಯವರು ಸೀಜ್ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.