ಬಳ್ಳಾರಿ

ವಿಧಾನಸಭೆ ಚುನಾವಣೆ: ಪ್ರಥಮ ಬಾರಿಗೆ ಪೊಲೀಸ್ ವೀಕ್ಷಕರ ನೇಮಕ

Published On :

ಬಳ್ಳಾರಿ: ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಸಾಮಾನ್ಯ ವೀಕ್ಷಕರು, ಲೆಕ್ಕ ವೀಕ್ಷಕರಲ್ಲದೆ ಇದೇ ಪ್ರಥಮ ಬಾರಿಗೆ ಪೊಲೀಸ್ ವೀಕ್ಷಕರನ್ನಾಗಿ ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿ ಎಸ್.ವಿ. ರಮಾನಂದ್‌ರನ್ನು ಚುನಾವಣಾ ಆಯೋಗ ನಿಯೋಜಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದರೂ ಅವರ ಮೊಬೈಲ್ ಸಂಖ್ಯೆ-8970060083ಗೆ ನೀಡಬಹುದು. ಪ್ರತಿದಿನ ಸಂಜೆ 4 ಗಂಟೆಯಿಂದ 6 ಗಂಟೆವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಇವರನ್ನು ಖುದ್ದಾಗಿ ಭೇಟಿ ಮಾಡಿಯೂ ದೂರು ನೀಡಬಹುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.