ಬಳ್ಳಾರಿ

ಹೂವಿನಹಡಗಲಿ: 22 ನಾಮಪತ್ರ ಕ್ರಮಬದ್ಧ

Published On :

ಹೂವಿನಹಡಗಲಿ: ಹೂವಿನಹಡಗಲಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಸಲ್ಲಿಸಲಾಗಿದ್ದ 22 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ಕೆ. ರಾಮಪ್ಪ ತಿಳಿಸಿದ್ದಾರೆ.
ಗುರುವಾರ ಇಲ್ಲಿನ ಮಿನಿ ವಿಧಾನಸೌಧದಲ್ಲಿ ಬಿಜೆಪಿ, ಕೆಜೆಪಿ, ಕಾಂಗ್ರೆಸ್, ಜೆಡಿಎಸ್, ಬಿಎಸ್‌ಆರ್ ಕಾಂಗ್ರೆಸ್, ಎಎನ್‌ಸಿ, ಸಿಪಿಐ (ಎಂಎಲ್) ಹಾಗೂ ಪಕ್ಷೇತರ ಅಭ್ಯರ್ಥಿಗಳ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳು ನಾಮಪತ್ರ ಪರಿಶೀಲನೆ ಮಾಡಿದರು. 15 ಜನರು ಸಲ್ಲಿಸಿದ್ದ 22 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಹೇಳಿದರು. ಕೆಜೆಪಿ ಅಭ್ಯರ್ಥಿ ಎಲ್. ಮಧುನಾಯ್ಕ ಸರ್ಕಾರಿ ನೌಕರರಾಗಿದ್ದರು. ಅವರು ನಿರಾಕ್ಷೇಪಣಾ ಪತ್ರ ನೀಡಿದ್ದಾರೆಯೇ? ಎಂದು ಕಾಂಗ್ರೆಸ್ ಅಭ್ಯರ್ಥಿ ಪಿ.ಟಿ. ಪರಮೇಶ್ವರ ನಾಯ್ಕ ಪ್ರಶ್ನಿಸಿದರು. ಇದಕ್ಕೆ ಕೆಜೆಪಿ ಅಭ್ಯರ್ಥಿ ಮಧುನಾಯ್ಕ ಸ್ಪಷ್ಟನೆ ನೀಡಿ, ಈಗಾಗಲೇ ಸರ್ಕಾರ ತಮಗೆ ನಿರಾಕ್ಷೇಪಣಾ ಪತ್ರ ನೀಡಿದೆ. ಸಂಬಂಧಿಸಿದ ಇಲಾಖೆಯೂ ತಮಗೆ ಬಿಡುಗಡೆ ಮಾಡಿದೆ ಎಂದು ಸ್ಪಷ್ಟಪಡಿಸಿ, ಪತ್ರ ಪ್ರದರ್ಶಿಸಿದರು. ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಏ. 19, 20ರಂದು ಎರಡು ದಿನ ಅವಕಾಶವಿದೆ. ಏ. 20ರಂದು ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ. ಏ. 20ರಂದು ಸಂಜೆ 4 ಗಂಟೆಗೆ ಇಲ್ಲಿನ ಮಿನಿ ವಿಧಾನಸೌಧದಲ್ಲಿ ಚುನಾವಣಾ ನೀತಿ ಸಂಹಿತೆ ಕುರಿತು ಮಾಹಿತಿ ನೀಡಲು ಎಲ್ಲ ಪಕ್ಷಗಳ ಅಭ್ಯರ್ಥಿಗಳು ಮತ್ತು ಸೂಚಕರ ಸಭೆ ಕರೆಯಲಾಗಿದೆ.
ದೂರು ಸಲ್ಲಿಸಿ: ಹೂವಿನಹಡಗಲಿ ಕ್ಷೇತ್ರದಲ್ಲಿನ ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ಪಡೆಯಲು ಚುನಾವಣೆ ಪರಿವೀಕ್ಷಕರನ್ನಾಗಿ ಕೆ. ಭಾಸ್ಕರ ಅವರನ್ನು ಚುನಾವಣಾ ಆಯೋಗ ನೇಮಿಸಿದೆ. ಸಾರ್ವಜನಿಕರು ಚುನಾವಣೆ ಅಕ್ರಮಗಳಿಗೆ ಸಂಬಂಧಪಟ್ಟ ದೂರು ಹಾಗೂ ಮಾಹಿತಿಗಾಗಿ ಅವರನ್ನು ಸಂಜೆ 4 ಗಂಟೆಯಿಂದ 6 ಗಂಟೆ ವರೆಗೂ ಸಂಪರ್ಕಿಸಬಹುದು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರು ಅವರನ್ನು ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ- 7353765137 ಸಂಪರ್ಕಿಸಬಹುದು ಎಂದು ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.