ಬಳ್ಳಾರಿ

ಮತದಾನ ಜಾಗೃತಿ ಜಾಥಾ (ಸುದ್ದಿ ಸಂಕ್ಷೇಪ)

Published On :

ಬಳ್ಳಾರಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಾಗನೂರು ಗ್ರಾಮದಲ್ಲಿ ಇತ್ತೀಚೆಗೆ ಮತದಾನ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಸುತ್ತಮುತ್ತಲಿನ ಅಂಗನವಾಡಿ ಕಾರ್ಯಕರ್ತೆಯರು, ಕಿಶೋರಿಯರು, ಸ್ತ್ರೀ-ಶಕ್ತಿ ಸಂಘದ ಸದಸ್ಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು, ಆರೋಗ್ಯ ಇಲಾಖೆ ಸಿಬ್ಬಂದಿ ಜಾಥಾ ನಡೆಸಿ, ಚಾಗನೂರು ಗ್ರಾಮದ ಜನರಲ್ಲಿ ಮತದಾನ ಕುರಿತು ಅರಿವು ಮೂಡಿಸಿದರು. ಅಂಗನವಾಡಿ ಕಾರ್ಯಕರ್ತೆಯರಾದ ಜ್ಯೋತಿ, ವಿಜಯಲಕ್ಷ್ಮಿ, ನೇತ್ರಾವತಿ, ಮೇಲ್ವಿಚಾರಕಿ ಸಾಯಿಪ್ರಭ, ಆರೋಗ್ಯ ಇಲಾಖೆ ಸಿಬ್ಬಂದಿ ಅನಸೂಯಮ್ಮ ಮತ್ತು ಮಂಜು ಜಾಥಾದಲ್ಲಿ ಭಾಗವಹಿಸಿದ್ದರು.
ತಟಸ್ಥವಾಗುಳಿದ ಪುತ್ರೇಶ
ಹೂವಿನಹಡಗಲಿ: ಜೆಡಿಎಸ್ ಪಕ್ಷದಿಂದ ಟಿಕೆಟ್ ಸಿಗದೆ ವಂಚನೆಯಾಗಿದ್ದು, ಯಾವ ಪಕ್ಷಕ್ಕೂ ತಮ್ಮ ಬೆಂಬಲವಿಲ್ಲ, ಸದ್ಯ ತಟಸ್ಥವಾಗಿರುವುದಾಗಿ ಜೆಡಿಎಸ್ ಬಂಡಾಯ ಅಭ್ಯರ್ಥಿ ಕೆ. ಪುತ್ರೇಶ ತಿಳಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ದಿನಗಳ ಹಿಂದೆ ಜೆಡಿಎಸ್ ಸೋಲಿಸುವುದೇ ತಮ್ಮ ಗುರಿ ಮತ್ತು ತಾವು ಬೇಷರತ್ತಾಗಿ ಕೆಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದೇನೆಂಬ ಹೇಳಿಕೆ ಹಿಂಪಡೆದಿರುವುದಾಗಿ ಸ್ಪಷ್ಟಪಡಿಸಿದರು. ಕಾಂಗ್ರೆಸ್, ಜೆಡಿಎಸ್, ಕೆಜೆಪಿ ಸೇರಿದಂತೆ ಯಾವ ಪಕ್ಷಕ್ಕೂ ಬೆಂಬಲಿಸಿಲ್ಲ, ಯಾರ ಪರವಾಗಿಯೂ ಪ್ರಚಾರ ಮಾಡಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಮುಂಬರುವ ದಿನಗಳಲ್ಲಿ ತಮ್ಮ ಬೆಂಬಲಿಗರ ಜತೆಗೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು. ಲೋಕೇಶ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.