ಅಬ್ದುಲ್ ವಹಾಬ್ ರೋಡ್ ಶೋ
ಹೊಸಪೇಟೆ: ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್. ಅಬ್ದುಲ್ ವಹಾಬ್ ಗುರುವಾರ ಕ್ಷೇತ್ರದ ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ನಗರದ ಕೆಲ ವಾರ್ಡ್ಗಳಲ್ಲಿ ಸಂಚರಿಸಿ ಮತ ಯಾಚನೆ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಈ ಕ್ಷೇತ್ರದಲ್ಲೂ ತಮ್ಮನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಅವಕಾಶ ಕಲ್ಪಿಸಿಕೊಡಬೇಕು. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದ್ದು, ಕಾಂಗ್ರೆಸ್ ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಬುಧವಾರ ರಾತ್ರಿ ನಗರದಲ್ಲಿ ಅಬ್ದುಲ್ ವಹಾಬ್ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ನಗರದ ಪಾದಕಟ್ಟೆ ಅಂಜನೇಯ ಸ್ವಾಮಿ ದೇವಸ್ಥಾನ, ಮಸೀದಿ ರಸ್ತೆ, ರಾಜವೀರ ಮದಕರಿ ನಾಯಕ ವೃತ್ತ, ಮಾರ್ಕಂಡೇಶ್ವರ ದೇವಸ್ಥಾನ, 100 ಹಾಸಿಗೆ ಆಸ್ಪತ್ರೆ ರಸ್ತೆ, ಶಾನಭಾಗ್ ವೃತ್ತದ ವರೆಗೆ ರೋಡ್ ಶೋ ನಡೆಯಿತು. ಮುಖಂಡರಾದ ಎಚ್.ಎನ್.ಎಫ್. ಅಹಮ್ಮದ್ ಇಮಾಮ್ ನಿಯಾಜಿ, ಅಬಿದ್ ಹುಸೇನ್, ಡಿ. ವೆಂಕಟರಮಣ, ಅಯ್ಯಾಳಿ ಮೂರ್ತಿ, ಅಬ್ದುಲ್ ವಹಾಬ್ ಅವರ ಪುತ್ರ ಶದಬ್ ವಹಾಬ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

