ಬಳ್ಳಾರಿ

ಅಭಿವೃದ್ಧಿ ವಿಷಯದಲ್ಲಿ ಪಕ್ಷ ರಾಜಕಾರಣ ಮಾಡಲ್ಲ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಏ. 25
ವಿಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಗುರುವಾರ ನಗರದ ಕೆಲ ವಾರ್ಡ್‌ಗಳಲ್ಲಿ ಬಿರುಸಿನ ಪ್ರಚಾರ ನಡೆಸಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆನಂದ್ ಸಿಂಗ್, ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ. ಅಭಿವೃದ್ಧಿ ವಿಷಯದಲ್ಲಿ ಎಂದಿಗೂ ಪಕ್ಷ ರಾಜಕಾರಣ ಮಾಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. ಈಗಾಗಲೇ ಮಹತ್ವದ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ನಡೆದಿವೆ. ಇನ್ನು ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿರುವುದರಿಂದ ಮತ್ತೊಮ್ಮೆ ತಮಗೆ ಅವಕಾಶ ಕಲ್ಪಿಸಿಕೊಡುವಂತೆ ಮತದಾರರಲ್ಲಿ ವಿನಂತಿಸಿಕೊಂಡರು.
ಈ ಹಿಂದೆ ಈ ಕ್ಷೇತ್ರದಿಂದು ಗೆದ್ದು ಹೋದವರು ಇಷ್ಟೊಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿರಲಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮುಂದಿನ ದಿನಗಳಲ್ಲಿ ನೀರಾವರಿಗೆ ಮತ್ತು ಕೆರೆಗಳಿಗೆ ತುಂಗಭದ್ರಾ ಜಲಾಶಯದಿಂದ ನೀರು ತುಂಬಿಸುವಂತಹ ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗುವುದು. ಮಳೆಯಾಶ್ರಿತ ಪ್ರದೇಶಗಳಲ್ಲಿ ನೀರಾವರಿ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶವನ್ನು ಹೊಂದಲಾಗಿದೆ. ಇದರೊಂದಿಗೆ ಹೊಸಪೇಟೆ ನಗರವನ್ನು ಅತ್ಯಂತ ಸುಂದರವಾದ ನಗರವನ್ನಾಗಿ ಅಭಿವೃದ್ಧಿಪಡಿಸುವ ಅವಕಾಶವನ್ನು ಕಲ್ಪಿಸಿಕೊಡಬೇಕಾಗಿದೆ ಎಂದು ಆನಂದ್ ಸಿಂಗ್ ಮನವಿ ಮಾಡಿದರು.
ನಗರದ ಸಿದ್ದಲಿಂಗಪ್ಪ ಚೌಕಿ, ಗೌಳೇರ ಹಟ್ಟಿ, ಮೇನ್ ಬಜಾರ್ ಪ್ರದೇಶ ಸೇರಿದಂತೆ ಇತರೆ ವಾರ್ಡ್‌ಗಳಿಗೆ ಭೇಟಿ ನೀಡಿ ಮತಯಾಚಿಸಿದರು.  ಆನಂದ್ ಸಿಂಗ್ ಮತಯಾಚನೆ ವೇಳೆ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.