ಬಳ್ಳಾರಿ

ಪಕ್ಷೇತರ ಅಭ್ಯರ್ಥಿ ಬಂಡೇಗೌಡ ವಿರುದ್ಧ ದೂರು

Published On :

ಬಳ್ಳಾರಿ: ನಗರ ವಿಧಾನಸಭಾ ಕ್ಷೇತ್ರದಿಂದ ಕೆಜೆಪಿ ಬೆಂಬಲಿತ ಅಭ್ಯರ್ಥಿ ಎಂದು ಹೇಳಿ ಪ್ರಚಾರ ನಡೆಸುತ್ತಿರುವ ಪಕ್ಷೇತರ ಅಭ್ಯರ್ಥಿ ಪಿ. ಬಂಡೇಗೌಡ ಅವರ ವಿರುದ್ಧ ಜಿಲ್ಲಾ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕೆಜೆಪಿ ಜಿಲ್ಲಾಧ್ಯಕ್ಷ ಹಂಪೇರು ಹಾಲೇಶ್ವರಗೌಡ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಜೆಪಿ ಕಾರ್ಯಕರ್ತರಾಗಿದ್ದ ಪಿ. ಬಂಡೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವಾಗ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಯಾವುದೇ ರೀತಿಯ ಅನುಮತಿ ಪಡೆದಿಲ್ಲ. ನಗರದಲ್ಲೀಗ ಪಕ್ಷದ ಶಾಲ್‌ಗಳು, ಬಾವುಟ ಧರಿಸಿ, ಕೆಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂದು ಹೇಳಿ ಪ್ರಚಾರ ನಡೆಸುತ್ತಿದ್ದಾರೆ. ಇದರಿಂದ ಪಕ್ಷವನ್ನು ದುರುಪಯೋಗ ಪಡಿಸಿಕೊಂಡಂತಾಗುತ್ತದೆ. ಈ ಕುರಿತು ರಾಜ್ಯ ಘಟಕದ ಪದಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ನಗರ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಗೆ ಬೆಂಬಲ ಸೂಚಿಸಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಪರಿಶೀಲಿಸಿ ಮಾಹಿತಿ ತಿಳಿಸುವುದಾಗಿ ಹೇಳಿದ್ದಾರೆ ಎಂದರು.
ಪಿ. ಬಂಡೇಗೌಡರಿಗೆ ಕೆಜೆಪಿಯ ಜಿಲ್ಲಾ ಸಮಿತಿಯಾಗಲಿ, ರಾಜ್ಯ ಸಮಿತಿಯಾಗಲಿ ಬೆಂಬಲ ನೀಡಿಲ್ಲ. ಈ ಹಿನ್ನಲೆಯಲ್ಲಿ ಪಕ್ಷದ ಜಿಲ್ಲಾ ಘಟಕದಿಂದ ಅವರಿಗೆ ನೋಟಿಸ್ ನೀಡಲಾಗುವುದು ಎಂದ ಅವರು, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳಿದರು.
ಕೆಜೆಪಿ ಗ್ರಾಮೀಣ ಅಭ್ಯರ್ಥಿ ಪಾಂಡು ಅವರು ರೈತರ, ಸಾರ್ವಜನಿಕರ ಸಮಸ್ಯೆಗಳನ್ನು ಬಲ್ಲವರಾಗಿದ್ದು, ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಏ. 29ರಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಮೋಕಾ ಗ್ರಾಮಕ್ಕೆ ಆಗಮಿಸಿ, ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದರು. ಕೆಜೆಪಿ ಗ್ರಾಮೀಣ ಅಭ್ಯರ್ಥಿ ಪಾಂಡು ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ಬಸಯ್ಯಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಎಸ್‌ಟಿ ಘಟಕದ ಕಾರ್ಯದರ್ಶಿ ರಾಮಕೃಷ್ಣ, ಕಾರ್ಮಿಕ ಘಟಕದ ಅಧ್ಯಕ್ಷ ಸಿದ್ದೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕಮಲಾ ಬಸವರಾಜ್, ಖಾದರ್ ಭಾಷ, ವಿಶ್ವನಾಥ, ಕೃಷ್ಣಪ್ಪ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.